ಕುಂದಾಪುರ : ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕುಗಳ ಶಾಲಾ ಕಾಲೇಜುಗಳಿಗೆ ಕುಂದಾಪುರ ಉಪವಿಭಾಗಾಧಿಕಾರಿಯವರು 08.07.2024 ರಂದು ಸೋಮವಾರ ರಜೆ ಘೋಷಿಸಿದ್ದಾರೆ ಎಂಬ ಸುಳ್ಳು ಆದೇಶದ ಪ್ರತಿಯೊಂದನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು ವಿದ್ಯಾರ್ಥಿಗಳ ಪೋಷಕರಲ್ಲಿ ತೀವ್ರ ಗೊಂದಲಕ್ಕೆ ಕಾರಣವಾಗಿದೆ.
ಅಂತಹ ಯಾವುದೇ ಆದೇಶ ನೀಡಿಲ್ಲ, ಇದು ನಕಲಿ ಆದೇಶ ಎಂದು ಉಪವಿಭಾಗಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ನಿನ್ನೆ ಸ್ಪಷ್ಟಪಡಿಸಲಾಗಿದೆ. ಕಳೆದ ಕೊರೋನಾ ಸಾಂಕ್ರಾಮಿಕದ ಸಂದರ್ಭದಲ್ಲಿಯೂ ಕಿಡಿಗೇಡಿಗಳು ಇಂತಹದ್ದೇ ಸುಳ್ಳು ಸುದ್ದಿಗಳನ್ನು ಪ್ರಸರಿಸಿ, ವಿದ್ಯಾರ್ಥಿಗಳ ಹೆತ್ತವರಲ್ಲಿ ಗೊಂದಲಕ್ಕೆ ಕಾರಣರಾಗಿದ್ದರು. ಈ ಸಂದರ್ಭದಲ್ಲಿ ಕಿಡಿಗೇಡಿಗಳ ಮೇಲೆ ಪ್ರಕರಣ ಕೂಡ ದಾಖಲಿಸಲಾಗಿತ್ತು