Home » ಸಾರ್ವಜನಿಕ ಸ್ಥಳದಲ್ಲಿ ಯುವಕರ ತಂಡದಿಂದ ಗಲಾಟೆ
 

ಸಾರ್ವಜನಿಕ ಸ್ಥಳದಲ್ಲಿ ಯುವಕರ ತಂಡದಿಂದ ಗಲಾಟೆ

by Kundapur Xpress
Spread the love

ಬಂಟ್ವಾಳ : ಗ್ರಾಮದ ಮಂಚಿಕಟ್ಟೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯುವಕರ ತಂಡದಿಂದ ಗಲಾಟೆ ಬಗ್ಗೆ ಪ್ರಕರಣ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಪೊಲೀಸರಿಗೆ ಮಾಹಿತಿ ಬಂದ ಹಿನ್ನೆಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ಪೊಲೀಸರು ಸ್ಥಳಕ್ಕೆ ತಲುಪಿದಾಗ, ವಿಜೇತ್, ರಕ್ಷಿತ್ ಕೊಟ್ಟಾರಿ, ಪುಷ್ಪರಾಜ್, ಅಜಯ್, ಜಮೀ‌ರ್ ಮತ್ತು ಮೊಹಮ್ಮದ್ ಮುಸ್ತಫಾ ಎಂಬ ಯುವಕರ ಗುಂಪು ತೀವ್ರ ವಾಗ್ವಾದದಲ್ಲಿ ತೊಡಗಿದ್ದರು. ಅವರು ಅವಾಚ್ಯ ಶಬ್ದಗಳನ್ನು ಬಳಸಿ ಸಾರ್ವಜನಿಕ ಶಾಂತಿ ಮತ್ತು ಕೋಮು ಸಾಮರಸ್ಯವನ್ನು ಕದಡುವ ರೀತಿಯಲ್ಲಿ ಹೊಡೆದಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ತನಿಖೆ ಮುಂದುವರೆದಿದೆ.

 

Related Articles

error: Content is protected !!