ಕುಂದಾಪುರ:ವೆಂಕಟರಮಣ ದೇವಸ್ಥಾನದ ಎದುರಿನ ರಥಬೀದಿಯಲ್ಲಿರುವ ಪಟಾಕಿ ಅಂಗಡಿಯೊಂದರಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿದ್ದು ಸ್ಥಳಕ್ಕೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಭೇಟಿ ನೀಡಿ.
ಪಟಾಕಿ ಅಂಗಡಿಯಲ್ಲಿ ಬೆಂಕಿ ಆಹುತಿಯಾದ ಪುಸ್ತಕದಂಗಡಿ ಸೇರಿದಂತೆ ಐದಾರು ಅಂಗಡಿಗಳಿಗೆ ಬೆಂಕಿ ವ್ಯಾಪಿಸಿದ್ದು. ಇದರ ಪರಿಣಾಮ ಕೋಟ್ಯಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದ್ದು ಕ್ಷೇತ್ರದ ಶಾಸಕರು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ತುರ್ತು ಪರಿಹಾರ ಕಲ್ಪಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಕುಂದಾಪುರ ತಾಲ್ಲೂಕು ಸಹಾಯಕ ಆಯುಕ್ತರಾದ ಶ್ರೀಮತಿ ರಶ್ಮಿ ಆರ್, ತಾಲೂಕು ತಹಶೀಲ್ದಾರಾದ ಪ್ರದೀಪ್ ಕುರುಡೇಕರ್, ಕುಂದಾಪುರ ಪುರಸಭಾ ಮುಖ್ಯ ಅಧಿಕಾರಿ ಆನಂದ.ಜಿ,ಮಾಜಿ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಕುಂದಾಪುರ ಡಿವೈಎಸ್ಪಿ ಎಚ್ ಡಿ ಕುಲಕರ್ಣಿ, ಕುಂದಾಪುರ ಠಾಣಾ ಇನ್ಸ್ಪೆಕ್ಟರ್ ಜಯರಾಂ ಗೌಡ, ಮಾಜಿ ಪುರಸಭಾ ಸದಸ್ಯರಾದ ಸಂತೋಷ್ ಶೆಟ್ಟಿ ಹಾಗೂ ವಿವಿಧ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

