ಕುಂದಾಪುರ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಬೆಂಗಳೂರು ಇವರ ಸಯುಕ್ತ ಆಶ್ರಯದಲ್ಲಿ ಇಂದು ವಡ್ಡರ್ಸೆ ನಾರಾಯಣ ಗುರು ವಸತಿ ಶಾಲೆಯ ನೂತನ ಕಟ್ಟಡ ಕಾಮಗಾರಿಯ ಶಂಕು ಸ್ಥಾಪನೆಯನ್ನು ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್.ಸಿ. ಮಹದೇವಪ್ಪ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರದ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆ, ವಡ್ಡರ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷ ಲೋಕೇಶ್, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಶ್ರೀಮತಿ ಸತ್ಯಾವತಿ ಜಿ, ರಾಜ್ಯ ಸರಕಾರದ ಕಾರ್ಯದರ್ಶಿ ಹಣಕಾಸು ಹಣಕಾಸು ಇಲಾಖೆಯ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ! ಎಂ.ಟಿ ರೇಜು, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ದಯಾನಂದ, ಉಡುಪಿ ಜಿಲ್ಲಾಧಿಕಾರಿ ಡಾ! ಕೆ.ವಿದ್ಯಾ ಕುಮಾರಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ! ಅರುಣ್. ಕೆ., ಜಿಲ್ಲಾ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್,
ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

