ಕೋಟ : ಸಮಾಜದ ಬಗ್ಗೆ ಸದಾ ತುಡಿತ ಹೊಂದಿದ ಈಶ್ವರ್ ಮಲ್ಪೆ ತಂಡ ಸಾಮಾಜಿಕ ಕಾರ್ಯ ನಿಜಕ್ಕೂ ಶ್ಲಾಘನೀಯ ಅದರ ಜತೆ ಸ್ಥಳೀಯವಾಗಿ ಹಲವು ಜನಪರ ಕಾರ್ಯಕ್ರಮಗಳಿಂದ ಪಂಚವರ್ಣ ಸಂಸ್ಥೆ ಎಲ್ಲರಿಗೂ ಮಾದರಿಯಾಗಿದೆ ಎಂದು ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇಗುಲದ ಆಡಳಿತ ಮಂಡಳಿಯ ಸದಸ್ಯ ಕೆ.ಅನಂತಪದ್ಮನಾಭ ಐತಾಳ್ ಹೇಳಿದರು. ಮಂಗಳವಾರ ಕೋಟ ಅಮೃತೇಶ್ವರಿ ದೇಗುಲದಲ್ಲಿ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಜೀವರಕ್ಷಕ ಟೀಮ್ ಈಶ್ವರ್ ಮಲ್ಪೆ ಇವರ ಆಶ್ರಯದಲ್ಲಿ ನಡೆದ ಶ್ರವಣ ತಪಾಸಣೆ, ರಿಯಾಯಿತಿ ದರದಲ್ಲಿ ಶ್ರವಣ ಸಾಧನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸುವ ಸಂಘಸAಸ್ಥೆಗಳು ಊರಿನಲ್ಲಿ ಹುಟ್ಟಿಕೊಳ್ಳಬೇಕು ಆ ಮೂಲಕ ಆ ಗ್ರಾಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್,ಜೀವನ್ ಮಿತ್ರ ಸೇವಾ ಟ್ರಸ್ಟ್ ಮುಖ್ಯಸ್ಥ ನಾಗರಾಜ್ ಪುತ್ರನ್,ಟೀಮ್ ಈಶ್ವರ್ ಮಲ್ಪೆ ತಂಡದ ಲವ ಬಂಗೇರ,ವಿಘ್ನಹರ್ತ ಕ್ಲಿನಿಕ್ ಉಡುಪಿ ಇದರ ವೈದ್ಯೆ ಡಾ.ಅಂಕಿತಾ,ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ನಿಯೋಜಿತ ಅಧ್ಯಕ್ಷ ಮನೋಹರ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಚಾಲಕಿ ಸುಜಾತ ಬಾಯರಿ ನಿರೂಪಿಸಿದರೆ ,ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರು. ಸಲಹಾ ಸಮಿತಿ ಅಧ್ಯಕ್ಷ ರವೀಂದ್ರ ಕಾರ್ಯಕ್ರಮ ಸಂಯೋಜಿಸಿ ವಂದಿಸಿದರು.ಉಪಾಧ್ಯಕ್ಷ ದಿನೇಶ್ ಆಚಾರ್ ಸಹರಿಸಿದರು.ಕೋಟ ಅಮೃತೇಶ್ವರಿದೇಗುಲ ಸಹಕಾರ ನೀಡಿತು