ನವದೆಹಲಿ : ಚುನಾವಣೆ ಸಂದರ್ಭದಲ್ಲಿ ಮತದಾರರನ್ನು ಸೆಳೆಯಲು ಉಚಿತ ಕೊಡುಗೆಗಳ ಮಳೆ ಸುರಿಸುವ ರಾಜಕೀಯ ಪಕ್ಷಗಳ ವಿರುದ್ಧಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆ ನಡೆಸಲಿದೆ. ಲೋಕಸಭೆ ಚುನಾವಣೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ.
ಉಚಿತ ಕೊಡುಗೆ ಘೋಷಣೆಗಳು ಅಸಾಂವಿಧಾನಿಕವಾಗಿವೆ. ಹೀಗಾಗಿ ಇವುಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು. ಉಚಿತ ಘೋಷಣೆಗಳನ್ನು ಪ್ರಕಟಿಸುವ ರಾಜಕೀಯ ಪಕ್ಷಗಳ ಚಿಹ್ನೆಯನ್ನು ಚುನಾವಣಾ ಆಯೋಗ ಮುಟ್ಟುಗೋಲು ಹಾಕಿಕೊಂಡು, ಅಂತಹ ಪಕ್ಷಗಳ ನೋಂದಣಿಯನ್ನು ರದ್ದುಗೊಳಿಸಬೇಕು ಎಂದು ಹಿರಿಯ ವಕೀಲ, ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಹಿಂದೆಯೇ ಸಲ್ಲಿಸಿದ್ದರು.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೂ ಮೊದಲೇ ವಿಚಾರಣೆ ನಡೆಸಬೇಕು ಎಂದು ಬುಧವಾರ ನ್ಯಾಯಾಲ ಯದಲ್ಲಿ ಉಪಾಧ್ಯಾಯ ಅವರ ಪರ ವಕೀಲರು ಕೋರಿದರು. ಇದು ಮುಖ್ಯವಾದುದು. ನಾಳೆ ವಿಚಾರಣೆ ನಡೆಸುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಭರವಸೆ ನೀಡಿತು.