ಕೋಟ : ಮೂಡು ಗಿಳಿಯಾರು ಜನಸೇವಾ ಟ್ರಸ್ಟ್,ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್,ಬೆಂಗಳೂರಿನ ಒನ್‍ಸೈಟ್ ಎಸ್ಸಿಲಾರ್ ಲಕ್ಸೋಟಿಕಾ ಫೌಂಡೇಶನ್,ಕೋಟ-ಗಿಳಿಯಾರು ಲಯನ್ಸ್ ಕ್ಲಬ್ ಹಾಗೂ ಕೋಟ ಮಾಂಗಲ್ಯ ಮಂದಿರದ ಸಂಯುಕ್ತ ಆಶ್ರಯದಲ್ಲಿ ಅ.12 ರಂದು ಕೋಟ ಮಾಂಗಲ್ಯ ಮಂದಿರದಲ್ಲಿ ಉಚಿತ ನೇತ್ರ ತಪಾಸಣೆ, ಕನ್ನಡಕ ವಿತರಣೆ ಹಾಗೂ ಪೆÇರೆ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಜನಸೇವಾ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.
ಅ.12 ರ ಶನಿವಾರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ1.00 ರವರೆಗೆ ನಡೆಯುವ ಶಿಬಿರದಲ್ಲಿ ನುರಿತ ತಜ್ಞ ವೈದ್ಯರು ಭಾಗವಹಿಸಲಿದ್ದಾರೆ.ಉಚಿತವಾಗಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗುವುದು. ಅಗತ್ಯ ಇರುವವರಿಗೆ ಉಚಿತವಾಗಿ ಕನ್ನಡಕ ನೀಡಲಾಗುವುದು ಹಾಗೂ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲಾಗುವುದು.ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರನ್ನು ಗೊತ್ತು ಪಡಿಸಿದ ದಿನಾಂಕದಂದು ಉಡುಪಿ ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆಗೆ ವಾಹನದಲ್ಲಿ ಕರೆದುಕೊಂಡು ಹೋಗಿ,ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಿ ಮರುದಿನ ಮನೆಗೆ ವಾಪಸು ಕರೆತಂದು ಬಿಡಲಾಗುವುದು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ, ಉಡುಪಿ ಪ್ರಸಾದ್ ನೇತ್ರಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ
ಮೋಹನ್‍ದಾಸ್ ( 9945170508 ) ಅಥವಾ ಜನ ಸೇವಾ ಟ್ರಸ್ಟ್‍ನ ನಿಖಿಲ್ ನಾಯಕ್ ( 8310667248 ) ಅವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.