Home » ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ ಅನುಕರಣೀಯ
 

ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ ಅನುಕರಣೀಯ

ಡಾ. ಉಮೇಶ್ ಪುತ್ರನ್

by Kundapur Xpress
Spread the love

ಕೋಟ : ಸ್ವಾತಂತ್ರ್ಯ ಹೋರಾಟಗಾರರ ನೆನಪು ಸ್ವಾತಂತ್ರ್ಯ ದಿನಕ್ಕೆ ಸೀಮಿತವಾಗುತ್ತಿರುವುದು ವಿಷಾದನೀಯ. ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸುವುದು ಕುಟುಂಬಸ್ಥರ ತ್ಯಾಗವನ್ನು ಸ್ಮರಿಸಿಕೊಳ್ಳವುದು ಅಗತ್ಯದ ವಿಷಯವಾಗಿದೆ. ಈ ದಿಸೆಯಲ್ಲಿ ಈ ಕಾರ್ಯಕ್ರಮ ಶ್ಲಾಘನೀಯ ಮತ್ತು ಅನುಕರಣೀಯವಾಗಿದೆ ಎಂದು ಕುಂದಾಪುರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ನುಡಿದರು.
ಅವರು ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರತಿಷ್ಠಾನ ಕೋಟ, ಡಾ| ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಗ್ರಾಮ ಪಂಚಾಯತ್ ಪ್ರಸ್ತುತಿ ರೋಟರಿ ಕ್ಲಬ್ ಕೋಟ – ಸಾಲಿಗ್ರಾಮ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸಮಾವೇಶ, ಜಿಲ್ಲಾಮಟ್ಟದ ಚಿತ್ರರಚನೆ ಮತ್ತು ಕಾರಂತರ ಕೃತಿಗಳ ಹೆಸರು ಬರೆಯುವ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಥೀಂ ಪಾರ್ಕ್ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್‌ರವರು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಸಮಸ್ಯೆಗಳಿಗೆ ಸರಕಾರ ಸ್ಪಂದಿಸುವಂತಾಗಲಿ ಎಂದು ಹಾರೈಸಿ ಕುಟುಂಬಸ್ಥರನ್ನು ಗೌರವಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರೋಟರಿ ಕ್ಲಬ್ ಕೋಟ ಸಾಲಿಗ್ರಾಮದ ಅಧ್ಯಕ್ಷ ತಿಮ್ಮ ಪೂಜಾರಿ, ಸ್ವರಾಜ್ 75ರ ಸಂಘಟಕ ಪ್ರದೀಪ್ ಕುಮಾರ್ ಬಸ್ರೂರು, ಟ್ರಸ್ಟಿಗಳಾದ ಸುಬ್ರಾಯ ಆಚಾರ್ ಮಣೂರು, ಸುಶೀಲಾ ಸೋಮಶೇಖರ್ ಉಪಸ್ಥಿತರಿದ್ದರು. ಸತೀಶ ವಡ್ಡರ್ಸೆ ಕಾರ್ಯಕ್ರಮ ನಿರೂಪಿಸಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದ ಬಳಿಕ ಕುಟುಂಬಸ್ಥರೊಂದಿಗೆ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿವೇಕ ಬಾಲಕಿಯರ ಪ್ರೌಢಶಾಲೆಯ ಸಮಾಜ ವಿಜ್ಞಾನ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟ ಸಂವಾದ ನಡೆಸಿ ಕೊಟ್ಟರು.

   

Related Articles

error: Content is protected !!