ಉಡುಪಿ : ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 25ರವರೆಗೆ ನಡೆಡ “ವಿಕಸಿತ ಭಾರತ ಸಂಕಲ್ಪ ಯಾತ್ರೆ” ಯ ಸಮಾರೋಪ ಸಮಾರಂಭ ಎಲ್ಲೂರೂ ಗ್ರಾಮ ಪಂಚಾಯತ್ ಬಳಿ ನಡೆಯಿತು

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಸಭಾ ಕಾರ್ಯಕ್ರಮನ್ನು ಉದ್ಘಾಟಿಸಿ ಬಳಿಕ ಮುದ್ರಾ ಯೋಜನೆ ಅಡಿಯಲ್ಲಿ ಮಂಜೂರಾದ ಸಾಲ ಸೌಲಭ್ಯದ ಆದೇಶ ಪತ್ರವನ್ನು ಹಾಗೂ ಆಯುಷ್ಮಾನ್ ಕಾರ್ಡ್ ಮತ್ತು ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಂಜೂರಾದ ಉಚಿತ ಗ್ಯಾಸ್ ಸಂಪರ್ಕಗಳನ್ನು ಫಲಾನುಭವಿಗಳಿಗೆ ವಿತರಿಸಿದರು
ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಉಪಾಧ್ಯಕ್ಷರಾದ ಉಷಾ, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಜಿಲ್ಲಾ ಪ್ರಭಾರಿಗಳಾದ ಶೊಯ್ಯಬ್ ಅಹಮ್ಮದ್ ಕಲಾಲ್, ನಬಾರ್ಡ್ ನ ಸಂಗೀತಾ ಕರ್ತ, ಲೀಡ್ ಬ್ಯಾಂಕ್ ಪ್ರಬಂಧಕರಾದ ಬೀರ್ ಸಾಬ್ ಪಿಂಜಾರ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ವಿಕಸಿತ ಭಾರತ ಸಂಕಲ್ಪ ಯಾತ್ರೆಯ ನೋಡಲ್ ಅಧಿಕಾರಿಗಳಾದ ಸಚಿನ್, ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಡಾ. ಧನಂಜಯ್, ಕೃಷಿ ಇಲಾಖೆಯ ವೆಂಕಟೇಶ್, ರುಡ್ ಸೆಟ್ ಸಂಸ್ಥೆಯ ಕರುಣಾಕರ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಎಲ್ಲೂರು ಗ್ರಾಮ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು

