ಉಡುಪಿ. : ಎಸ್.ಡಿ.ಎಮ್ ಆಯುರ್ವೇದ ಕಾಲೇಜ್, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಕುತ್ಪಾಡಿ, ಉಡುಪಿ. ಸಂಸ್ಥೆಯು ನ್ಯಾಶನಲ್ ಕಮಿಶನ್ ಫಾರ್ ಇಂಡಿಯನ್ ಸಿಸ್ಟಮ್ ಅಪ್ ಮೆಡಿಸಿನ್ (NCISM) ನಡೆಸಿದ ( MARBISM) ಭಾರತೀಯ ವೈದ್ಯ ಪದ್ಧತಿಯ ಸಂಸ್ಥೆಗಳ ವೈದ್ಯಕೀಯ ಮೌಲ್ಯಮಾಪನ ಸಂಸ್ಥೆ ನವ ದೆಹಲಿ ಹಾಗೂ (QCI) ರಾಷ್ಟ್ರೀಯ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಮೌಲ್ಯಮಾಪನದಲ್ಲಿ ಅಖಿಲ ಭಾರತ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದು, ಕಾಲೇಜಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಪ್ರಾಂಶುಪಾಲರಾದ ಮಮತಾ ಕೆ.ವಿ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರು ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯರಾದ ಜಿತೇಂದ್ರ ಶೆಟ್ಟಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ನಾಗರಾಜ್ ಎಸ್, ಶೈಕ್ಷಣಿಕ ವಿಭಾಗದ ಮುಖ್ಯಸ್ಥರಾದ ಡಾ. ಶ್ರೀಲತಾ ಕಾಮತ್ ಆಸ್ಪತ್ರೆಯ ಉಪವೈದ್ಯಕೀಯ ಅಧೀಕ್ಷಕರಾದ ಡಾ. ದೀಪಕ್ ಎಸ್.ಎಮ್, ಕಾಲೇಜಿನ ಆಡಳಿತ ಮುಖ್ಯಾಧಿಕಾರಿಯಾದ ಡಾ. ವೀರಕುಮಾರ ಕೆ, ಸ್ನಾತಕೋತ್ತರ ವಿಭಾಗದ ಡೀನ್ ಡಾ. ಅಶೋಕ್ ಕುಮಾರ್ ಬಿ.ಎನ್, ಸ್ನಾತಕ ವಿಭಾಗದ ಡೀನ್ ಡಾ. ರಜನೀಶ್ ವಿ. ಗಿರಿ, ಆಸ್ಪತ್ರೆಯ ಹಿರಿಯ ವೈದ್ಯಕೀಯ ಸಲಹೆಗಾರ ಡಾ. ಕೆ. ನಿಶಾಂತ್ ಪೈ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗದವರು ಹಾಗೂ ವೈದ್ಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.