ಕೋಟ : ಕೋಡಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಪಂಚವರ್ಣ ಸಂಘಟನೆ ಕೋಟ ಇವರ ಸಂಯೋಜನೆಯೊಂದಿಗೆ ಶಿಶು ಅಭಿವೃದ್ದಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ ಕೋಡಿ ಹಾಗೂ ಎಸ್‌ಎಲ್‌ಆರ್‌ಎಂ ಘಟಕ ಕೋಡಿ ಇವರ ಸಹಯೋಗದೊಂದಿಗೆ ಕೋಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಖಾರ್ವಿ,ಸದಸ್ಯ ಪ್ರಭಾಕರ್ ಮೆಂಡನ್ ಮತ್ತು ಕೃಷ್ಣ ಪೂಜಾರಿ ಇವರ ಮಾರ್ಗದರ್ಶನದಲ್ಲಿ ಮನೆಗೊಂದು ಗಿಡ ನೆಡುವ ೨ನೇ ವರ್ಷದ ಮೂರು ತಿಂಗಳ ಪರಿಸರಸ್ನೇಹಿ ಹಸಿರು ಜೀವ ಅಭಿಯಾನ ಹೊಸಬೆಂಗ್ರೆ ಅಂಗನವಾಡಿ ಕಾರ್ಯಕರ್ತೆ ಯಮುನಾ ಎಲ್ ಕುಂದರ್ ಸಹಕಾರದೊಂದಿಗೆ ಕೋಡಿ ಹೊಸಬೆಂಗ್ರೆ ವಸಂತಿ ಸೂರ್ಯಖಾರ್ವಿಯವರ ಮನೆಯಿಂದ ಚಾಲನೆ ನೀಡಲಾಯಿತು.
ಪ್ರತಿಭಾನುವಾರ ೨೦ಮನೆಗಳಲ್ಲಿ ಗಿಡ ನಡುವ ಯೋಜನೆ ಇದಾಗಿದ್ದು ಗ್ರಾಮಸ್ಥರ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನಗೊಳ್ಳುತ್ತಿದೆ.
ಕಾರ್ಯಕ್ರಮದಲ್ಲಿ ಕೋಡಿ ಗ್ರಾ.ಪಂ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮ, ಮಾಜಿ ಸಂಜೀವಿನಿ ಅಧ್ಯಕ್ಷೆ ದೀಪಾ ಆರ್ ಖಾರ್ವಿ ಸ್ತ್ರೀ ಶಕ್ತಿ ಸಂಘದ ಸದಸ್ಯರಾದ ಶಾರದಾ,ಸುಜಾತ ಖಾರ್ವಿ ಹಾಗೂ ಸ್ಥಳೀಯರು ಭಾರತಿ, ಸವಿತಾ ಪುಟಾಣಿಗಳು ಪ್ರಥಮ, ಪ್ರಣಮ್ ಉಪಸ್ಥಿತರಿದ್ದರು.

