ಕಾರ್ಕಳ : ಕಾರ್ಕಳ ತಾಲೂಕಿನ ಬೋಳ ಎಂಬಲ್ಲಿ ಅಬಕಾರಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯದ ಬಾಕ್ಸ್ಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ವೇಳೆ ಲಕ್ಷಾಂತರ ರೂ. ಮೌಲ್ಯದ ಸುಮಾರು 260ಕ್ಕೂ ಅಧಿಕ ಮಧ್ಯದ ಬಾಕ್ಸ್ಗಳು ಪತ್ತೆಯಾಗಿವೆ.ಅಬಕಾರಿ ಅಧಿಕಾರಿಗಳು ಅದನ್ನು ಜಪ್ತಿ ಮಾಡಿ ಕಾರ್ಕಳ ಅಬಕಾರಿ ಇಲಾಖೆಯಲ್ಲಿ ದಾಸ್ತಾನಿರಿಸಿದ್ದಾರೆ. ಇವೆಲ್ಲವೂ ಬ್ರಾಂಡೆಡ್ ಮಾಲುಗಳಾದ ಜಾನಿ ವಾಕರ್, ಬ್ಲಾಕ್ ಲೇಬಲ್ ಗೋವಾ ರಾಜ್ಯದ ಮದ್ಯಗಳಾಗಿದೆ ಆರೋಪಿಗಳು ಪರಾರಿಯಾಗಿದ್ದು ಅಬಕಾರಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.
ಆರೋಪಿಗಳ ಪತ್ತೆಗಾಗಿ ಮತ್ತು ನಕಲಿ ಮದ್ಯ ತಯಾರಿಕೆ, ರವಾನೆ ಹೇಗೆ ನಡೆಯುತ್ತಿದೆ ಎನ್ನುವುದರ ಕುರಿತು ಉಡುಪಿ ಜಿಲ್ಲಾ ಅಬಕಾರಿ ಉಪ ಆಯುಕ್ತ ಬಿಂದುಶ್ರೀ ತಂಡ ತನಿಖೆ ಮುಂದುವರಿಸಿದೆ