Home » ಗುಣಮಟ್ಟದ ಶಿಕ್ಷಣ ಇನ್ನೂ ಹೆಚ್ಚಿನ ರೀತಿಯಲ್ಲಿ ದೊರೆಯುವಂತಾದರೆ ಶಾಲೆಯ ಅಭಿವೃದ್ಧಿ ಖಂಡಿತ
 

ಗುಣಮಟ್ಟದ ಶಿಕ್ಷಣ ಇನ್ನೂ ಹೆಚ್ಚಿನ ರೀತಿಯಲ್ಲಿ ದೊರೆಯುವಂತಾದರೆ ಶಾಲೆಯ ಅಭಿವೃದ್ಧಿ ಖಂಡಿತ

ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ

by Kundapur Xpress
Spread the love

ಕುಂದಾಪುರ:ತಾಲೂಕಿನ ವಕ್ವಾಡಿ ಪ್ರೌಢಶಾಲೆಯಲ್ಲಿ ನಡೆಯಲಿರುವ ತಾಲೂಕು ಮಟ್ಟದ 14 ಹಾಗೂ 17 ರ ವಯೋಮಿತಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ- ಬಾಲಕಿಯರ ಕ್ರೀಡಾಕೂಟ- 2025- 26 ಇದರ ಪೂರ್ವಭಾವಿ ಸಭೆ ಇಂದು ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕ್ರೀಡಾಕೂಟ ನಿರ್ವಹಣೆಗೆ ತಮಗೆ ಕೊಟ್ಟ ಕರ್ತವ್ಯ ಮತ್ತು ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದರೆ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ಈ ಉತ್ಸವದಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿದಾಗ ಊರಿನ ಹಬ್ಬವಾಗುತ್ತದೆ. ಪ್ರೌಢಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗುತ್ತಿರುವುದರ ಬಗ್ಗೆ ಸಮಗ್ರ ಚಿಂತನೆಯಾಗಬೇಕು. ಊರಿನ ಸಹಕಾರದೊಂದಿಗೆ ಗುಣಮಟ್ಟದ ಶಿಕ್ಷಣ ಇನ್ನೂ ಹೆಚ್ಚಿನ ರೀತಿಯಲ್ಲಿ ದೊರೆಯುವಂತಾದರೆ ಶಾಲೆಯ ಅಭಿವೃದ್ಧಿ ಖಂಡಿತ ಸಾಧ್ಯ ಎಂದು ಶಾಸಕರು ಹೇಳಿದರು.

ಇದೇ ವೇಳೆ ಕ್ರೀಡಾಕೂಟದ ವಿವಿಧ ಸಮಿತಿಗೆ ಪ್ರಮುಖರನ್ನಾಗಿ ನೇಮಕ ಮಾಡಿ ಜವಾಬ್ದಾರಿಗಳನ್ನು ಹಂಚಲಾಯಿತು. ಹಾಗೂ ಕ್ರೀಡಾಕೂಟದ ಯಶಸ್ವಿಗೆ ಊರಿನವರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು ಸದ್ರಿ ಈ ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಣಗಲ್ ಮನೆ, ಎಸ್ ಡಿಎಂಸಿ ಅಧ್ಯಕ್ಷ ರಾಜೀವ ಕುಲಾಲ, ಪಂಚಾಯತ್ ಸದಸ್ಯರಾದ ರವಿರಾಜ್ ಶೆಟ್ಟಿ, ರಮೇಶ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಸುಜಾತ ಬಿ,ಯುವಜನ ಸೇವಾ ಕ್ರೀಡಾಧಿಕಾರಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಕುಸುಮಾಕರ ಶೆಟ್ಟಿ ಪ್ರಮುಖರಾದ ಸತೀಶ್ ಪೂಜಾರಿ ವಕ್ವಾಡಿ,ಅಶೋಕ್ ಪೂಜಾರಿ ವಕ್ವಾಡಿ ಬಿ.ಕೆ.ಶೆಟ್ಟಿ ವಕ್ವಾಡಿ , ನರಸಿಂಹ ಪೂಜಾರಿ ವಕ್ವಾಡಿ ಆನಂದ ಆಚಾರ್ಯ ವಕ್ವಾಡಿ ಪ್ರಮೋದ ಶೆಟ್ಟಿ ವಕ್ವಾಡಿ ಸುಧಾಕರ ಪೂಜಾರಿ ವಕ್ವಾಡಿ ,ಕೀರ್ತಿ ಶೆಟ್ಟಿ ವಕ್ವಾಡಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯಿನಿರಾದ ಸುಜಾತ ಬಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಕುಸುಮಕರ ಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು.

 

Related Articles

error: Content is protected !!