ಕುಂದಾಪುರ : ಕುಂದಾಪುರ ನಗರದ ಸರಕಾರಿ ಆಸ್ಪತ್ರೆಯ ಹೆರಿಗೆ ವಿಭಾಗದಲ್ಲಿ ಹೆರಿಗೆ ವೇಳೆ ಮಗು ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು ಮಗುವಿನ ಹೆತ್ತವರು ಬಂಧುಗಳು ಹಾಗೂ ಗ್ರಾಮಸ್ಥರು ಸೋಮವಾರ ಸಂಜೆಯ ವೇಳೆಗೆ ದಿಢೀರ್ ಪ್ರತಿಭಟನೆ ನಡೆಸಿ ಹೆರಿಗೆ ಮಾಡಿಸಿದ ವೈದ್ಯರನ್ನು ತಕ್ಷಣ ಅಮಾನತು ಮಾಡಬೇಕೆಂದು ಪಟ್ಟುಹಿಡಿದಿದ್ದಾರೆ
ನ.17 ರಂದು ರಾತ್ರಿ 10.30 ರ ವೇಳೆಗೆ ಗಂಗೊಳ್ಳಿಯ ಗುಡ್ಡದಕೇರಿಯ ದಾವನಮನೆ ಶ್ರೀನಿವಾಸ ಖಾರ್ವಿ ಅವರ ಪತ್ನಿ ಜ್ಯೋತಿ ಎಂಬವರು ಹೆರಿಗೆ ನೋವಿನಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು ಸೋಮವಾರ ಬೆಳಗ್ಗೆ ವೈದ್ಯರು ಸಹಜ ಹೆರಿಗೆ ಮಾಡಿಸಿದಾಗ ಮಗು ಮೃತಪಟ್ಟಿತ್ತು ಮಗುವಿನ ಕುತ್ತಿಗೆಗೆ ಕರಳು ಬಳ್ಳಿ ಸುತ್ತಿಕೊಂಡು ಸಾವು ಸಂಭವಿಸಿದೆ ಎಂದು ಹೆರಿಗೆ ವಿಭಾಗದ ವ್ಯೆದ್ಯರು ತಿಳಿಸಿದ್ದಾರೆ
ಮಗುವಿನ ಕುತ್ತಿಗೆಗೆ ಹೊಕ್ಕುಳಬಳ್ಳಿ ಸುತ್ತಿಕೊಂಡು ಸಾವಾಗಿದೆ ಎಂದು ವೈದ್ಯರು ತಿಳಿಸಿದ್ದು ಉಡಾಫೆಯಿಂದ ಮಾತಾಡಿದ್ದಾಗಿ ಕುಟುಂಬಿಕರು ಆರೋಪಿಸಿದ್ದಾರೆ. ರಕ್ತಸ್ರಾವ ಇದೆ, ಹೊಟ್ಟೆ ನೋವು ಇದೆ ಎಂದರೂ ವೈದ್ಯರು ಕ್ಯಾರೇ ಮಾಡಿಲ್ಲ. ಎಂಟೂವರೆ ತಿಂಗಳಿನ ವೇಳೆ ಸ್ಕಾನಿಂಗ್ ಮಾಡದ ಕಾರಣ ಈಗ ಸ್ಕ್ಯಾನಿಂಗ್ ಮಾಡಿ ಎಂದು ಮನೆಯವರು ಒತ್ತಾಯಿಸಿದರೂ ವೈದ್ಯರು ಸ್ಕಾನಿಂಗ್ ಮಾಡಿಸಲಿಲ್ಲ ಎಂದು ಗಂಭೀರ ಆರೋಪ ಮಾಡಿದ್ದಾರೆ
ಆಸ್ಪತ್ರೆಯ ಆಡಳಿತ ಶಸ್ತ್ರ ಚಿಕಿತ್ಸಕ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ಸ್ಥಳಕ್ಕೆ ತೆರಳಿ ಮನವಿಯನ್ನು ಮೇಲಾಧಿಕಾರಿಗಳಿಗೆ ಕಳುಹಿಸಲಾಗುವುದು ಎಂದರೂ ಪ್ರತಿಭಟನಕಾರರು ಸ್ಥಳ ಬಿಟ್ಟು ಕದಲದೆ ಬೆಳಿಗ್ಗೆಯ ವರೆಗೂ ಅಲ್ಲಿಯೇ ಮಲಗಿದ್ದು ಇಂದು ಪ್ರತಿಭಟನೆಯ ಕಾವು ಹೆಚ್ಚಾಗುವ ಸಂಭವವಿದೆ ಎಂದು ತಿಳಿದುಬಂದಿದೆ