ಕೋಟ: ಇಲ್ಲಿನ ಕೋಟದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಾರ್ಷಿಕ ವಾರ್ಷಿಕೋತ್ಸವ ಕಾರ್ಯಕ್ರಮ ಮಂಗಳವಾರ ಶಾಲಾ ವಠಾರದಲ್ಲಿ ಜರಗಿತು.
ಕಾರ್ಯಕ್ರಮವನ್ನು ಸಾಂಸ್ಕೃತಿಕ ಚಿಂತಕಿ ಭಾರತಿ ವಿ ಮಯ್ಯ ಉದ್ಘಾಟಿಸಿದರು. ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ವಿದ್ಯಾರ್ಥಿಗಳು ರಚಿಸಿದ ಹಸ್ತ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ವಹಿಸಿದ್ದರು.ಗೀತಾನಂದ ಫೌಂಡೇಶನ್ ಬಹುಮಾನಗಳನ್ನು ಕೊಡಮಾಡಿತು.
ಸಾಧಕ ವಿದ್ಯಾರ್ಥಿಗಳಿಗೆ ದತ್ತಿ ನಿಧಿಯನ್ನು ಶಾಲಾ ಶಿಕ್ಷಕಿ ಶಾರದ ವಾಚಿಸಿದರು.ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಗೌರವವನ್ನು ಸಲ್ಲಿಸಲಾಯಿತು. ಇದರ ಪತ್ರವನ್ನು ಶಿಕ್ಷಕಿಯರಾದ ಮಾನಸ,ಸುಮಾ ವಾಚಿಸಿದರು
ಮುಖ್ಯ ಅಭ್ಯಾಗತರಾಗಿ ಮಾಜಿ.ಜಿ.ಪಂ ಸದಸ್ಯ ಶಂಕರ್ ಕುಂದರ್,ಸಿಆರ್ ಪಿ ಸವಿತಾ ಆಚಾರ್, ಸಾಹಿತಿ ಶೈಕ್ಷಣಿಕ ಪ್ರೋತ್ಸಾಹಕ ಪ್ರೋ.ಉಪೇಂದ್ರ ಸೋಮಯಾಜಿ,ಉದ್ಯಮಿ ಸುಬ್ರಾಯ ಆಚಾರ್,ಶಾಲಾ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎಚ್ ಪ್ರಮೋದ್ ಹಂದೆ,ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಮಹಾಲಕ್ಷ್ಮೀ ಸೋಮಯಾಜಿ, ಉದ್ಭವಿ ಮತ್ತು ಪ್ರಣೀತ್ ಕುಮಾರ್ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಪುಷ್ಭಾವತಿ ಹೊಳ್ಳ ಸ್ವಾಗತಿಸಿ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಶಿಕ್ಷಕರಾದ ರೂಬಿ ಪ್ರಿಂಟೋ ನಿರೂಪಿಸಿದರು.