ಕೋಟ: ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ಸಾಧನೆ ಅನನ್ಯವಾದದ್ದು ಎಂದು ಗೀತಾ ಫೌಂಡೇಶನ್ ಪ್ರವರ್ತಕ ಶಂಕರ್ ಐತಾಳ್ ಹೇಳಿದರು.
ಬುಧವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಇಲ್ಲಿ ಉಚಿತ ನೋಟ್ ಬುಕ್ಸ್,ಬ್ಯಾಗ್, ಸಮವಸ್ತç, ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಪಠ್ಯ ಪುಸ್ತತ, ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರಸ್ತುತ ವರ್ಷಗಳಲ್ಲಿ ಖಾಸಗಿ ಶಾಲೆಗಳಿಗಿಂತ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಟಾಪರ್ಸ ಆಗಿ ಹೊರಹೊಮ್ಮುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.ಈ ದಿಸೆಯಲ್ಲಿಸರಕಾರಿ ಶಾಲೆಗಳ ಉಳಿವಿಗಾಗಿ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರಲ್ಲದೆ ಖಾಸಗಿ ಶಾಲೆಗಳ ಶೈಕ್ಷಣಿಕ ವ್ಯಾಮೂಹದಿಂದ ಹೊರಬರಬೇಕೆಂದು ಫೋಷಕರಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಬನಾ ಅಜುಂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರವನ್ನು ಹಸ್ತಾಂತರಿಸಿದರು.
ಇದೇ ವೇಳೆ ತಮ್ಮದೇ ಶಾಲೆಯಲ್ಲಿ ಕಲಿತು ಎಸ್ ಎಸ್ ಎಲ್ ಸಿಯಲ್ಲಿ 6ನೇ ರ್ಯಾಂಕ್ ಪಡೆದ ವೈಷ್ಣವಿ ಅಲ್ಸೆ ಇವರನ್ನು ಸನ್ಮಾನಿಸಲಾಯಿತು.
ಹಂಗಾರಕಟ್ಟೆ ಕ್ಲಸ್ಟರ್ ಹೆಡ್ ಮಾಲಿನಿ ಶಾಲೆಗೆ ವಿವಿಧ ಪರಿಕರವನ್ನು ಕೊಡುಗೆಯಾಗಿ ನೀಡಿದರು. ಐರೋಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಪಂಚಾಯತ್ ಸದಸ್ಯ ಶೇಖರ್ ಪೂಜಾರಿ,ಶಾಲಾಭಿವೃದ್ಧಿ ಸಮಿತಿ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್,ಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ಸೇಸು ಟೀಚರ್,ಶಿಕ್ಷಣ ಸಂಯೋಜಕ ಪ್ರಕಾಶ್ ಬಿ.ಬಿ,ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷೆ ರೇಖಾ ಉಡುಪ,ಚೇತನಾ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಪ್ರಸಿಲ್ಲಾ ಸ್ವಾಗತಿಸಿದರು.ಶಾಲಾ ವಿಜ್ಞಾನ ಶಿಕ್ಷಕಿ ವೀಣಾ ಶೆಟ್ಟಿ ಶೈಕ್ಷಣಿಕ ಪರಿಕರದ ಪತ್ರ ವಾಚಿಸಿದರು.ಕಾರ್ಯಕ್ರಮವನ್ನು ಶಿಕ್ಷಕಿ ಉಷಾರಾಣಿ ನಿರೂಪಿಸಿದರು

