Home » ತ್ರಿಶಾ ಕಾಲೇಜು: ಗ್ರಾಜುಯೇಟ್ಸ್ ಡೇ ಆಚರಣೆ
 

ತ್ರಿಶಾ ಕಾಲೇಜು: ಗ್ರಾಜುಯೇಟ್ಸ್ ಡೇ ಆಚರಣೆ

by Kundapur Xpress
Spread the love

ಕಟಪಾಡಿ : ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು, ಕಟಪಾಡಿಯ ವತಿಯಿಂದ ಮೇ 28, 2025ರಂದು ಬಿಎಂಜೆ ಹಾಲ್, ಶಂಕರಪುರದಲ್ಲಿ ಗ್ರಾಜುಯೇಟ್ಸ್ ಡೇ (Graduates Day) ಮತ್ತು ಪರಂಪರಾ ದಿನ(Traditional Day) ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಧಾನ ಅತಿಥಿಯಾಗಿ ಸಿಎ ಗುಜ್ಜಡಿ ಪ್ರಭಾಕರ ಎನ್ ನಾಯಕ್ ಅವರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶ್ರದ್ಧೆ, ಶಿಸ್ತು, ನಿಷ್ಠೆಯ ಮಹತ್ವವನ್ನು ಮತ್ತು ಪ್ರಾಯೋಗಿಕ ಜ್ಞಾನ ಮತ್ತು ನೈತಿಕ ಮೌಲ್ಯಗಳ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿಶಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಸಿಎ ಗೋಪಾಲ ಕೃಷ್ಣ ಭಟ್ ಅವರು ವಹಿಸಿದ್ದರು. ಅವರು ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸದುಪಯೋಗಪಡಿಸಿಕೊಳ್ಳಬಹುದಾದ ಶಿಕ್ಷಣದ ಮಹತ್ವ ಮತ್ತು ಜೀವನದ ಅರಿವಿನ ಕುರಿತು ಸಂದೇಶ ನೀಡಿದರು.
ವೇದಿಕೆಯಲ್ಲಿ ಸಿದ್ಧಾಂತ್ ಪೌಂಡೇಶನ್ ನ ಟ್ರಸ್ಟಿಯಾದ ನಮಿತಾ ಜಿ ಭಟ್, ತ್ರಿಶಾ ಸಮೂಹ ಸಂಸ್ಥೆಯ ಶೈಕ್ಷಣಿಕ ಸಲಹೆಗಾರ ಡಾ. ನಾರಾಯಣ್ ಕಾಯರ್ಕಟ್ಟೆ, ತ್ರಿಶಾ ವಿದ್ಯಾ ಕಾಲೇಜು ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ನ ಪ್ರಾಂಶುಪಾಲರಾದ ಪ್ರೊಫೆಸರ್ ನಾರಾಯಣ್ ರಾವ್, ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ವಿಘ್ನೇಶ್ ಶೆಣೈ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಧ್ಯಾಪಕರು, ತ್ರಿಶಾ ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

Related Articles

error: Content is protected !!