ಬೆಂಳೂರು : ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ J.P. ನಡ್ಡಾರವರ ಅಪೇಕ್ಷೆಯಂತೆ ಫೆಬ್ರವರಿ 9 ರಿಂದ 11 ರವರೆಗೆ 3 ದಿನಗಳ ಕಾಲ ನಡೆಯಲಿರುವ “ಗ್ರಾಮ ಚಲೋ ಅಭಿಯಾನಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಗೊಲ್ಲಹಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.
ರಾಜ್ಯದ 28 ಸಾವಿರಕ್ಕೂ ಹೆಚ್ಚು ಗ್ರಾಮಗಳಲ್ಲಿ, 19 ಸಾವಿರ ನಗರ ಮಟ್ಟದ ಬೂತ್ ಗಳಲ್ಲಿ 42 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಈ ಅಭಿಯಾನದಲ್ಲಿ ಭಾಗವಹಿಸಿ ‘ಮೋದಿ ಮತ್ತೊಮ್ಮೆ‘ ಗೋಡೆ ಬರಹ ದೊಂದಿಗೆ, ಪ್ರಧಾನಿ ಮೋದಿಜೀ ಅವರ ಕನಸು 2047 ರ ಹೊತ್ತಿಗೆ ಭಾರತ ವಿಕಸಿತ ಭಾರತವಾಗುವ ದೃಷ್ಟಿಯಿಂದ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳು, ಸಾಧನೆಗಳು ಹಾಗೂ ಜನಕಲ್ಯಾಣ ಕಾರ್ಯಕ್ರಮಗಳನ್ನು ಮನೆ ಮನೆಗಳಿಗೆ ತಲುಪಿಸಿ ಮಗದೊಮ್ಮೆ ಮೋದಿಜೀ ಅವರನ್ನು ಪ್ರಧಾನಿ ಪಟ್ಟಕ್ಕೇರಿಸುವ ಸಂಕಲ್ಪವಾಗಿದೆ
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ನಂದೀಶ್ ರೆಡ್ಡಿ, ಶಾಸಕರು ಹಾಗೂ ರಾಜ್ಯ ಕಾರ್ಯದರ್ಶಿ ಶ್ರೀ ಶೈಲೇಂದ್ರ ಬೆಲ್ದಾಳೆ, ಶ್ರೀ ವಿನಯ್ ಬಿದಿರೆ, ಶ್ರೀ ಶರಣು ತಳ್ಳೀಕೆರೆ, ಜಿಲ್ಲಾಧ್ಯಕ್ಷರಾದ ಶ್ರೀ ಎಸ್.ಹರೀಶ್, ಮುಖಂಡರಾದ ಶ್ರೀ ಅನಿಲ್ ಚಳಗೇರಿ, ಶ್ರೀ ಎಂ.ರುದ್ರೇಶ್, ಶ್ರೀ ಎಂ.ರಂಗರಾಜು ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು