ಚಿಕ್ಕಬಳ್ಳಾಪುರ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಜೆ ಪಿ ನಡ್ಡಾಜೀ ಅವರ ಕರೆಯ ಮೇರೆಗೆ ದೇಶದಾದ್ಯಂತ ಬಿಜೆಪಿ ಗ್ರಾಮ ಪರಿಕ್ರಮ ಯಾತ್ರೆ ಹಮ್ಮಿಕೊಂಡಿದ್ದು, ಚಿಕ್ಕಬಳ್ಳಾಪುರ ತಾಲ್ಲೂಕಿನ ದಿಬ್ಬೂರು ಗ್ರಾಮದಲ್ಲಿ ಗೋ ಪೂಜೆ ನೆರವೇರಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಲಾಯಿತು. ದಿಬ್ಬೂರು ಗ್ರಾಮದ ತಾಯಂದಿರು ರೈತ ಮುಖಂಡರು ಹಾಗೂ ಕಾರ್ಯಕರ್ತರು ಪ್ರೀತಿ ಪೂರ್ವಕವಾಗಿ ಸ್ವಾಗತಿಸಿದರು
ರಾಜ್ಯದ ಪ್ರತಿಯೊಂದು ರೈತ ಕುಟುಂಬಕ್ಕೂ ಹಲವಾರು ಯೋಜನೆಗಳು ದೊರೆತಿದ್ದು, ಗ್ರಾಮೀಣ ಪ್ರದೇಶದ ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಮೋದಿಜೀ ಅವರ ಸರ್ಕಾರ ನೀಡಿರುವ ಕೊಡುಗೆಗಳು ಹಾಗೂ ರೈತಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸಿ ಮಗದೊಮ್ಮೆ ಮೋದಿ ಸರ್ಕಾರವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಲಾಯಿತು
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೀವ್ ಗಿ ವಿ ಅವರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ ರಾಜೀವ್ ರೈತ ಮೋರ್ಚಾ ರಾಜ್ಯ ಅಧ್ಯಕ್ಷರಾದ ನಡಹಳ್ಳಿ ಜಿಲ್ಲಾಧ್ಯಕ್ಷರಾದ ಶ್ರೀ ರಾಮಲಿಂಗಪ್ಪ ಶಾಸಕರು ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಶ್ರೀ ಎಂ.ರುದ್ರೇಶ್, ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಸಿ ಮುನಿರಾಜು, ಶ್ರೀ ಶರಣು ತಳ್ಳೀಕೆರೆ, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ರೀ ಅಶೋಕ್ ಕುಮಾರ್, ಮುಖಂಡರಾದ ಶ್ರೀ ಕೆ.ವಿ ನಾಗರಾಜು, ಶ್ರೀ ಪಿ.ಎಂ ರಘುನಾಥ್, ಶ್ರೀ ರಾಮಚಂದ್ರೇಗೌಡ, ಶ್ರೀ ಶಶಿಧರ್, ಶ್ರೀ ಕೇಶವ ರೆಡ್ಡಿ ಅವರು ಸೇರಿದಂತೆ ಸ್ಥಳೀಯ ಮುಖಂಡರು, ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು, ಹಾಗೂ ರೈತಬಂಧುಗಳು ಉಪಸ್ಥಿತರಿದ್ದರು.

