ಕುಂದಾಪುರ : ಇತ್ತೀಚೆಗೆ ದೆಹಲಿಯಲ್ಲಿ GST ಕೌನ್ಸಿಲ್ ಸಭೆ ದೆಹಲಿಯಲ್ಲಿ ನಡೆಯಿತು, ಪ್ರಧಾನ ಮಂತ್ರಿಗಳು ಅಲ್ಲಿ “ಐತಿಹಾಸಿಕ ತೆರಿಗೆ ಇಳಿಕೆ ನಿರ್ಧಾರವನ್ನು ಕೈಗೊಂಡಿದ್ದು ಇದರಿಂದ ಬಡವರಿಗೆ ಮಧ್ಯಮ ವರ್ಗದವರಿಗೆ ದೊಡ್ಡ ಪ್ರಮಾಣದಲ್ಲಿ ಸಹಾಯವಾಗಲಿದೆ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದರು. ತದನಂತರ ಕುಂದಾಪುರ ಶಾಸ್ತ್ರಿ ಸರ್ಕಲ್ ಬಳಿ ಪಟಾಕಿಯನ್ನು ಸಿಡಿಸಿ ನಂದಿನಿ ಕೆಎಂಎಫ್ ನಲ್ಲಿ ಉತ್ಪನ್ನದ ಮಳಿಗೆಯಲ್ಲಿ ಸಿಹಿ ತಿಂಡಿ ಖರೀದಿಸಿ ಸಾರ್ವಜನಿಕರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಬಡ ಹಾಗೂ ಮಧ್ಯಮ ವರ್ಗದವರಿಗೆ ನವರಾತ್ರಿಯ ಶುಭದಿನದಂದು ಒಳ್ಳೆಯ ಗಿಫ್ಟನ್ನು ದೇಶದ ಜನತೆಗೆ ನೀಡಿರುವ ಬಗ್ಗೆ ಹರ್ಷ ವ್ಯಕ್ತಪಡಿಸಿದರು.ಕುಂದಾಪುರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಈ ಸಂಭ್ರಮಾಚರಣೆ ನೇತೃತ್ವವನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್ ಪುರಸಭೆ ಅಧ್ಯಕ್ಷ ಮೋಹನ್ ದಾಸ್ ಶೆಣೈ ಪುರಸಭೆ ಉಪಾಧ್ಯಕ್ಷೆ ಶ್ರೀಮತಿ ವನಿತಾ ಬಿಲ್ಲವ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ ವಿ ಮತ್ತು ಕುಂದಾಪುರ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಪುರಸಭೆ ಮತ್ತು ವಿವಿಧ ಕ್ಷೇತ್ರದ ಜನ ಪ್ರತಿನಿಧಿಗಳು ಮೋದಿಜಿ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು.

