ಉಡುಪಿ : ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಇದರ 45 ನೇ ವಾರ್ಷಿಕ ಮಹಾಸಭೆಯಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರನ್ನು ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಮಾಜಿ ಸಚಿವರಾದ ಪ್ರಮೋದ್ ಮತ್ತು ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಹಾಗೂ ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.