254
ಉಡುಪಿ : ಉಡುಪಿಜಿಲ್ಲಾ ಪಾಣ ಯಾನೆ ನಲಿಕೆಯವರ ಸಮಾಜ ಸೇವಾ ಸಂಘ (ರಿ.) ಉಡುಪಿ ಜಿಲ್ಲೆ ವತಿಯಿಂದ ಇಂದು ದಿನಾಂಕ 03-09-2023 ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಆಯೋಜಿಸಲಾದ “ಜಿಲ್ಲಾ ಪಾಣರ ವಾರ್ಷಿಕೋತ್ಸವ ಸಮಾರಂಭ ಮತ್ತು ಸಮಾವೇಶ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಆಶೀರ್ವಚಿಸಿದರು.
ಈ ಸಂದರ್ಭದಲ್ಲಿ ಚಲನಚಿತ್ರ ನಟ ನಿರ್ದೇಶಕರಾದ ರಿಷಬ್ ಶೆಟ್ಟಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಉಡುಪಿ ಜಿಲ್ಲಾ ಪಾಣ ಯಾನೆ ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪಾಂಡುರಂಗ ಎಸ್. ಪಡ್ಡಂ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

