ಕಾಪು : ವಿಧಾನಸಭಾ ಕ್ಷೇತ್ರದ ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಗ್ರಾಮದ ವಿವಿಧ ಕಾಮಗಾರಿಗೆ 89 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಈ ಕಾಮಗಾರಿಗಳನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಸೇರಿ ಉದ್ಘಾಟಿಸಿದರು.
ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಗ್ರಾಮದ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಸಂಪರ್ಕ ರಸ್ತೆ ಅಭಿವೃದ್ಧಿ – 35 ಲಕ್ಷ, ಪೆರ್ಣಂಕಿಲ ಗ್ರಾಮದ ಜನತಾ ನಗರದಲ್ಲಿ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನೀರಿನ ಓವರ್ ಹೆಡ್ ಟ್ಯಾಂಕ್ ನಿರ್ಮಾಣ – 34 ಲಕ್ಷ, ಪೆರ್ಣಂಕಿಲ ಗ್ರಾಮದ ಜಡ್ಡು ರಸ್ತೆ ಅಭಿವೃದ್ಧಿ – 20 ಲಕ್ಷ ಸೇರಿದಂತೆ ಒಟ್ಟು 89 ಲಕ್ಷ ರೂಪಾಯಿ ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಕೋಡಿಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಇಂದಿರಾ ಕೆ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಸದಾನಂದ ಪ್ರಭು, ಅರುಣ್ ಕುಮಾರ್ ಶೆಟ್ಟಿ, ರಾಮಾ ನಾಯ್ಕ್ ಹಾಗೂ ಪಕ್ಷದ ಹಿರಿಯರು, ಪ್ರಮುಖರು ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.