ನಿರಂತರವಾಗಿ ಸುರಿದ ಮಳೆಗೆ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆಬೆಟ್ಟು ಧೂಮಾವತಿ ಸ್ಥಾನದ ಬಳಿ ಮನೆಗಳಿಗೆ ನೀರು ನುಗ್ಗಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರೆ ಬಾದಿತ ಪ್ರದೇಶಗಳಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷರಾದ ಯಶೋದಾ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಸಂದೇಶ್ ಶೆಟ್ಟಿ, ಅಶೋಕ್, ಶೋಭಾ ಶೆಟ್ಟಿ, ಗೀತಾ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ಬಾಲಕೃಷ್ಣ ದೇವಾಡಿಗ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್, ಪಡುಬಿದ್ರಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪಂಚಾಕ್ಷರಿ ಹಿರೇಮಠ, ಗ್ರಾಮ ಆಡಳಿತಾಧಿಕಾರಿಗಳಾದ ಮಥಾಯಿ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.