ಉಡುಪಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕರ್ನಾಟಕ ಸಂಭ್ರಮ 50 ಮರಾಟಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ (ರಿ.) ಪೆರ್ಡೂರು ಇದರ ಸಹಕಾರದೊಂದಿಗೆ ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾದ “ಗಿರಿಜನ ಉತ್ಸವ – 2023” ಕಾರ್ಯಕ್ರಮವನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ, ಜಿಲ್ಲಾ ಕೊರಗ ಸಂಘದ ಅಧ್ಯಕ್ಷರಾದ ಗೌರಿ, ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷರಾದ ಶ್ರೀಧರ ಗೌಡ, ಪೆರ್ಡೂರು ಮರಾಠಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘದ ಅಧ್ಯಕ್ಷರಾದ ರವಿ ನಾಯ್ಕ ಹರಿಕಂಡಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಉಪಸ್ಥಿತರಿದ್ದರು.