ಕೋಟ: ಸಂಸ್ಕಾರಯುತ ನಡವಳಿಕೆಯು ಮನೆಯಿಂದಲೇ, ಅದರಲ್ಲೂ ಹೆತ್ತವರಿಂದಲೇ ದೊರಕಬೇಕಾದದ್ದು ಇಂದಿನ ಸಂಕೀರ್ಣ ಕಾಲಘಟ್ಟದಲ್ಲಿ ಅತ್ಯಂತ ಅವಶ್ಯಕವಾಗಿದ್ದು, ಮಕ್ಕಳು ನಮ್ಮ ಮಾತನ್ನು ಕೇಳುವುದಿಲ್ಲವೆಂದು ದೂರುವ ಬದಲು ಅವರು ನಮ್ಮನ್ನು ಗಮನಿಸುತ್ತಾರೆಂಬ ಅರಿವು ಇರಬೇಕೆಂದು ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಳದ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಹೇಳಿದರು.
ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಜ್ಞಾನಮಂದಿರದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆಯ ಸಹಕಾರದೊಂದಿಗೆ ಹಮ್ಮಿಕೊಂಡಿರುವ 28 ನೇ ವರ್ಷದ ವಸಂತ ವೇದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಔಪಚಾರಿಕ ಶಿಕ್ಷಣವು ಪರಿಣಾಮಕಾರಿಯಾಗಬೇಕಂದಲ್ಲಿ ಬದುಕಿನ ಕೌಶಲವನ್ನು ಅಳವಡಿಸಬೇಕಾಗಿದ್ದು, ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ವೇದ ಶಿಬಿರಗಳು ಈ ನಿಟ್ಟಿನಲ್ಲಿ ಪೂರಕ ವ್ಯವಸ್ಥೆಯಾಗಿ ಕಾರ್ಯ ನಿರ್ವಹಿಸಬಲ್ಲದು ಎಂದು ಅವರು ಅಭಿಪ್ರಾಯ ಪಟ್ಟರು.
ಸಮಾರಂಭದಲ್ಲಿ ಶ್ರೀ ದೇವಳದ ಆಡಳಿತ ಮಂಡಳಿಯ ಕೋಶಾಧಿಕಾರಿ ಪರಶುರಾಮ ಭಟ್ಟ, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ, ಸದಾಶಿವ ಐತಾಳ ,ಕೂಟಮಹಾಜಗತ್ತು ಕೇಂದ್ರ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಕೆ.ತಾರಾನಾಥ ಹೊಳ್ಳ, ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸAಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿÀ,ಗುರುಗಳಾದ ವಾದಿರಾಜ ಐತಾಳ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ದೇವಳದ ಗಣೇಶ ಭಟ್ಟ,ವ್ಯವಸ್ಥಾಪಕ ನಾಗರಾಜ ಹಂದೆ. ಕೂ ಮ ಜ ಸಾಲಿಗ್ರಾಮ ಅಂಗಸAಸ್ಥೆಯ ಚಿದಾನಂದ ತುಂಗ,ಕೇAದ್ರ ಸಂಸ್ಥೆಯ ಮಾಜಿ ಕಾರ್ಯದರ್ಶಿ ಮಂಜುನಾಥ ಉಪಾಧ್ಯ , ಕೂ ಮ ಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆಯ ಮಹಾಬಲ ಹೇರ್ಳೆ,ಶಿಬಿರಕ್ಕೆ ಸಹಕರಿಸಿದರು.
350 ಕ್ಕೂ ಹೆಚ್ಚು ವಿಪ್ರ ವಟುಗಳು ವಸಂತ ವೇದ ಶಿಬಿರದಲ್ಲಿ ಪಾಲ್ಗೊಂಡಿದ್ದರು.ಶಿಬಿರದ ಗುರುಗಳನ್ನು ಸಭೆಯಲ್ಲಿ ಶ್ರೀ ದೇವಳದ ಕಾರ್ಯದರ್ಶಿ ಲಕ್ಷ್ಮೀನಾರಾಯಣ ತುಂಗರು ವಂದಿಸಿದರು. ಅಕಿಲೇಶ್ ಐತಾಳ ಕಾರ್ಯಕ್ರಮ ನಿರೂಪಿಸಿದರು. ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ಜ್ಞಾನಮಂದಿರದಲ್ಲಿ ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗ ಸಂಸ್ಥೆಯ ಸಹಕಾರದೊಂದಿಗೆ ಹಮ್ಮಿಕೊಂಡಿರುವ 28 ನೇ ವರ್ಷದ ವಸಂತ ವೇದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶ್ರೀ ಗುರು ನರಸಿಂಹ ದೇವಳದ ಅಧ್ಯಕ್ಷ ಡಾ.ಕೆ.ಎಸ್.ಕಾರಂತ ಮಾತನಾಡಿದರು. ಶ್ರೀ ದೇವಳದ ಆಡಳಿತ ಮಂಡಳಿಯ ಕೋಶಾಧಿಕಾರಿ ಪರಶುರಾಮ ಭಟ್ಟ, ಕೂಟಮಹಾಜಗತ್ತು ಕೇಂದ್ರ ಸಂಸ್ಥೆಯ ಮಾಜಿ ಉಪಾಧ್ಯಕ್ಷ ಕೆ.ತಾರಾನಾಥ ಹೊಳ್ಳ, ಕೂಟ ಮಹಾಜಗತ್ತು ಸಾಲಿಗ್ರಾಮ ಅಂಗಸಂಸ್ಥೆಯ ಅಧ್ಯಕ್ಷ ಶ್ರೀಪತಿ ಅಧಿಕಾರಿ ಮತ್ತಿತರರು ಇದ್ದರು.