Home » ನಾಯಕತ್ವವು ಉತ್ತಮ ಸಂಸ್ಕಾರ ಹಾಗೂ ಸಾಮಾಜಿಕ ಬದ್ಧತೆಯಿಂದ ಕೂಡಿರಬೇಕು
 

ನಾಯಕತ್ವವು ಉತ್ತಮ ಸಂಸ್ಕಾರ ಹಾಗೂ ಸಾಮಾಜಿಕ ಬದ್ಧತೆಯಿಂದ ಕೂಡಿರಬೇಕು

by Kundapur Xpress
Spread the love

 ಕುಂದಾಪುರ : ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಬಾಂಡ್ಯ ಎಜುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಶ್ರೀಮತಿ ಅನುಪಮಾ ಎಸ್ ಶೆಟ್ಟಿರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿವಿಧ ಪದಾಧಿಕಾರಿಗಳಿಗೆ ಲಾಂಛನವನ್ನು ನೀಡಿ ಮಾತನಾಡಿದರು

ವಿದ್ಯಾರ್ಥಿ ಅಂದರೆ ಬರೀ ಪಠ್ಯಕ್ರಮಕ್ಕೆ ಸೀಮಿತವಾಗಿ ಓದಿನಲ್ಲಿ ತನ್ನನ್ನು ತೊಡಗಿಸಿಕೊಂಡರೆ ಮಾತ್ರ ಸಾಲದು, ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಬೇಕು. ನಾಯಕತ್ವವು ಉತ್ತಮ ಸಂಸ್ಕಾರ ಹಾಗೂ ಸಾಮಾಜಿಕ ಬದ್ಧತೆಯಿಂದ ಕೂಡಿರಬೇಕು. ಜೀವನದಲ್ಲಿ ಉದಾತ್ತವಾದ ಮೌಲ್ಯದೊಂದಿಗೆ ಶಿಸ್ತನ್ನು ಅಳವಡಿಸಿಕೊಂಡರೆ ಗೌರವಯುತವಾದ ಸ್ಥಾನವನ್ನು ಹೊಂದಲು ಸಾಧ್ಯ. ಕಲಿಕಾ ಹಂತದಲ್ಲಿ ದಕ್ಕಿದ ಒಳ್ಳೆಯ ಸ್ಥಾನಮಾನಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕೆಂದರು.

ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ರೂಪಾ ಶಣೈ ರವರು ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ ಶುಭ ಹಾರೈಸಿದರು. ಡಾಕ್ಟರ್ ಹಯವದನ ಉಪಾಧ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಮಾರಿ ವಿನಿಕಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಕುಮಾರಿ ಗಾನವಿ ವಂದಿಸಿದರು.

 

Related Articles

error: Content is protected !!