ಉಡುಪಿ : ಜಿಲ್ಲೆ ರಾಜ್ಯದ ಪ್ರವಾಸೋದ್ಯಮ ಕೇಂದ್ರ ಬಿಂದುವಾಗಿದೆ. ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 2024 ರಲ್ಲಿ 4.80 ಕೋಟಿ ಪ್ರವಾಸಿಗರು ಆಗಮಿಸಿದ್ದರೆ. 2025 ರಲ್ಲಿ ಇದರ ಪ್ರಮಾಣ 5.65 ಕೋಟಿ ಆಗಿದೆ. ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಪ್ರಮುಖ ಇಲಾಖೆಯಾಗಿರುವುದರಿಂದ ಹೊಸ ಪ್ರವಾಸಿ ಯೋಜನೆಗಳು ಹಾಗೂ ಈಗಾಗಲೇ ಇರುವ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕಾನೂನಿನ ವ್ಯಾಪ್ತಿಯಲ್ಲಿ ನಿಯಂತ್ರಿಸಲು ಪೂರ್ಣ ಕಾಲಿಕ ಅಧಿಕಾರಿಗಳ ಬದಲಿಗೆ ಅನ್ಯ ಇಲಾಖೆಯ ಪ್ರವಾಸೋದ್ಯಮ ಅಭಿವೃದ್ಧಿ ವಿಷಯಗಳ ಸಂಪೂರ್ಣ ಅರಿವಿರದ ಪ್ರಭಾರ ನೆಲೆಯಲ್ಲಿ ಅಧಿಕಾರಿಗಳನ್ನು ನೇಮಿಸಿದರೆ ಜಿಲ್ಲೆಯ ಪ್ರವಾಸೋದ್ಯಮದ ವಿಫುಲತೆಗಳನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯವಿಲ್ಲ. ಕರಾವಳಿ ಪ್ರವಾಸೋದ್ಯಮದ ಬಗ್ಗೆ ಸರಕಾರದ ಕಾಳಜಿ ಕೇವಲ ಹೇಳಿಕೆಗಷ್ಟೇ ಸೀಮಿತವಾಗದಿರಲಿ. ಸರಕಾರವು ಬಜೆಟ್ ನಲ್ಲಿ ಘೋಷಿಸಿರುವ ಕರಾವಳಿ ಪ್ರವಾಸೋದ್ಯಮ ನೀತಿಗಳು ತ್ವರಿತವಾಗಿ ಕಾರ್ಯರೂಪಕ್ಕೆ ಬರಬೇಕಾದರೆ ಜಿಲ್ಲೆಗೆ ಪೂರ್ಣ ಪ್ರಮಾಣದ ಅದರಲ್ಲೂ ಇಲಾಖಾ ಅಧಿಕಾರಿಗಳನ್ನೇ ಸಹಾಯಕ ನಿರ್ದೇಶಕ ಹುದ್ದೆಗೆ ನೇಮಕ ಮಾಡಬೇಕಾಗಿರುವುದರಿಂದ ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಸಹಾಯಕ ನಿರ್ದೇಶಕರ ಹುದ್ದೆಗೆ ಖಾಯಂ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದಿದ್ದಾರೆ*.
ಈ ಬಗ್ಗೆ ಮಾನ್ಯ ಮುಖ್ಯ ಮಂತ್ರಿಗಳು, ಉಪ ಮುಖ್ಯ ಮಂತ್ರಿಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್. ಕೆ ಪಾಟೀಲ್ ರವರಿಗೂ ಶಾಸಕರು ಪತ್ರ ಮುಖೇನ ಮನವಿ ಮಾಡಿದ್ದಾರೆ.

