Home » 2 ಲಕ್ಷ ಮತಗಳ ಅಂತರದಿಂದ ಕೋಟ ಗೆಲ್ಲಿಸಿ
 

2 ಲಕ್ಷ ಮತಗಳ ಅಂತರದಿಂದ ಕೋಟ ಗೆಲ್ಲಿಸಿ

ಮಾಜಿ ಪ್ರಧಾನಿ ದೇವೇಗೌಡ ಮನವಿ

by Kundapur Xpress
Spread the love

ಮೂಡಿಗೆರೆ : ದೇಶದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಓರ್ವ ಆದರ್ಶ ಮತ್ತು ಪ್ರಾಮಾಣಿಕ ರಾಜಕಾರಿಣಿ. ಕೋಟರವರನ್ನು ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಎಂದು ನೆರೆದ ಜನಸ್ತೋಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಮನವಿ ಮಾಡಿದರು. ಅವರು ಮೂಡಿಗೆರೆ ಅಡ್ಯoತಾಯ ರಂಗ ಮಂದಿರದಲ್ಲಿ ನಡೆದ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.

ಭಾರತ ದೇಶದಲ್ಲಿ ನರೇಂದ್ರ ಮೋದಿಯವರನ್ನು ಸರಿಗಟ್ಟುವ ಮತ್ತೊಬ್ಬ ರಾಜಕಾರಣಿ ನನಗಂತೂ ಕಂಡು ಬರುತ್ತಿಲ್ಲ. ನನಗೆ ಜೀವನದಲ್ಲಿ ಪ್ರಧಾನ ಮಂತ್ರಿಯಾಗಬೇಕು, ಮುಖ್ಯಮಂತ್ರಿ ಆಗಬೇಕು, ಮಂತ್ರಿ ಆಗಬೇಕು ಎಂಬ ಯಾವುದೇ ಆಸೆ ಇಲ್ಲ. ಆದರೆ ದೇಶವಾಸಿಗಳು ನೆಮ್ಮದಿಯಿಂದ ಇರಬೇಕು ಎನ್ನುವ ನನ್ನ ಆಸೆಗೆ ಪ್ರಧಾನಮಂತ್ರಿ ಆಗಲು ಸಾಮರ್ಥ್ಯ ಇರುವ ವ್ಯಕ್ತಿ ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾವುದೇ ವ್ಯಕ್ತಿ ಭಾರತದಲ್ಲಿಲ್ಲ. ಆ ಹಿನ್ನೆಲೆಯಲ್ಲಿ ಯಾವುದೇ ಷರತ್ತಿಲ್ಲದೆ ನಾನು ಮೋದಿಯವರನ್ನು ಬೆಂಬಲಿಸಿದೆ ಎಂದರು.

ಕೋಟ ಶ್ರೀನಿವಾಸ ಪೂಜಾರಿಯವರ ಎದುರು ನಿಂತ ಕಾಂಗ್ರೆಸ್ ಅಭ್ಯರ್ಥಿ ನನ್ನ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದವರು. ಆದರೆ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗೆ ಹೋಲಿಸಿದರೆ ಕೋಟರವರ ವ್ಯಕ್ತಿತ್ವ ಬಹಳ ಎತ್ತರದಲ್ಲಿ ನಿಲ್ಲುತ್ತದೆ. ಆ ಹಿನ್ನೆಲೆಯಲ್ಲಿ ಇಂತಹ ರಾಜಕಾರಣಿಗಳು ಸಂಸತ್ ಪ್ರವೇಶ ಮಾಡಬೇಕಾದಂತಹ ಅಗತ್ಯವಿದೆ. ಕೋಟ ಶ್ರೀನಿವಾಸ ಪೂಜಾರಿಯವರನ್ನು ಸಂಸತ್ತಿಗೆ ಕಳುಹಿಸಿ ಎಂಬ ಮೋದಿಯವರ ಮಾತಿಗೆ ನಾನು ಧ್ವನಿಗೂಡಿಸಿ ಕೋಟರವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡಬೇಕೆoದು ಕೈ ಮುಗಿದು ಪ್ರಾರ್ಥಿಸುತ್ತೇನೆ ಎಂದು ನೆರೆದ ಜನಸ್ತೋಮಕ್ಕೆ ದೇವೇಗೌಡರು ಮನವಿ ಮಾಡಿದರು.

ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾತನಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸುವ ಮೂಲಕ, ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿಯಾಗಿಸಿ ‘ವಿಕಸಿತ ಭಾರತ’ದ ಕನಸು ನನಸಾಗಿಸಲು‌ ಸಹಕಾರ ನೀಡಬೇಕೆಂದು ವಿನಂತಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ನ ಜಂಟಿ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿಯವರು ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ವಿಧಾನ ಪರಿಷತ್ತಿನ ಉಪ ಸಭಾಪತಿ ಎಮ್.ಕೆ. ಪ್ರಾಣೇಶ್, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕರಾದ ವೈ ಎಸ್ ವಿ ದತ್ತ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ವಿಧಾನ ಪರಿಷತ್ ಸದಸ್ಯ ಬೋಜೆ ಗೌಡ, ಮೂಡಿಗೆರೆ ಮಂಡಲ ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ, ಅಲ್ದೂರು ಮಂಡಲ ಅಧ್ಯಕ್ಷ ರವಿ ಬಸವರಹಳ್ಳಿ, ಸುರೇಶ ಗೌಡ ಸೇರಿದಂತೆ ಉಭಯ ಪಕ್ಷಗಳ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

   

Related Articles

error: Content is protected !!