Home » ಉಪ್ಪು ತಿಂದವರು ನೀರು ಕುಡಿಯಲೇಬೇಕು
 

ಉಪ್ಪು ತಿಂದವರು ನೀರು ಕುಡಿಯಲೇಬೇಕು

ಎಚ್.ಡಿ.ಕುಮಾರಸ್ವಾಮಿ

by Kundapur Xpress
Spread the love

ಬೆಂಗಳೂರು : ಹಾಸನ ಸಂಸದ ಹಾಗೂ ತಮ್ಮ ಸೋದರನ ಪುತ್ರ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ತೀಕ್ಷ್ಮವಾಗಿ ಹೇಳಿದ್ದಾರೆ. ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪ ಸಂಬಂಧ ಎಸ್ ಐಟಿ ರಚನೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿದರು.

ಹಾಸನ ಜಿಲ್ಲೆಯ ಪ್ರಕರಣದ ತನಿಖೆಗೆ ಮುಖ್ಯ ಮಂತ್ರಿಗಳು ವಿಶೇಷ ತನಿಖಾ ದಳ (ಎಸ್‌ಐಟಿ) ರಚನೆ ಮಾಡಿದ್ದಾರೆ. ಯಾರೇ ತಪ್ಪು ಮಾಡಿರಲಿ. ಈ ನೆಲದ ಕಾನೂನಿನ ಪ್ರಕಾರ ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ತಿಳಿಸಿದರು.

   

Related Articles

error: Content is protected !!