Home » ಕುಂದಾಪ್ರ : ಹಕ್ಕುಪತ್ರಗಳ ವಿತರಣೆ
 

ಕುಂದಾಪ್ರ : ಹಕ್ಕುಪತ್ರಗಳ ವಿತರಣೆ

by Kundapur Xpress
Spread the love

ಕುಂದಾಪುರ : ಬಾಕಿ ಉಳಿದಿರುವ ಹಕ್ಕುಪತ್ರಗಳ ವಿತರಣೆಗಿರುವ ತಾಂತ್ರಿಕ ಹಾಗೂ ಇತರ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್‌ ಹೆಬ್ಬಾಳ್ಕರ್‌ ಭರವಸೆ ನೀಡಿದರು  ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬುಧವಾರ ನಡೆದ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು

ಕುಂದಾಪುರ ತಾಲೂಕಿನಲ್ಲಿ ಸಾವಿರಕ್ಕೂ ಅಧಿಕ ಜನರಿಗೆ ಹಕ್ಕುಪತ್ರ ಸಿಕ್ಕಿಲ್ಲ, ಮುಂದಿನ ಮಾರ್ಚ್‌ನಲ್ಲಿ ಲೋಕಸಭಾ ಚುನಾವಣೆ ನಡೆಯಬಹುದು. ಈ ನಿಟ್ಟಿನಲ್ಲಿ ನೀತಿ ಸಂಹಿತೆ ಜಾರಿಗೂ ಮುನ್ನ ಹಕ್ಕುಪತ್ರಗಳ ವಿತರಣೆಗಿರುವ ಸಮಸ್ಯೆಗಳನ್ನು ಪರಿಹಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು ಸಮಾರಂಭದಲ್ಲಿ ಶಾಸಕರಾದ ಕಿರಣ ಕುಮಾರ ಕೊಡ್ಗಿ ಗುರುರಾಜ್‌ ಗಂಟಿಗೊಳೆ ಮಂಜುನಾಥ್‌ ಭಂಢಾರಿ ಹಾಗೂ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು

   

Related Articles

error: Content is protected !!