ಕುಂದಾಪುರ : ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಈ ಭಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರುವ ನಿರ್ಧಾರ ಕೈಗೊಂಡಿದ್ದು ಕುಂದಾಪುರದ ಮತದಾರರಲ್ಲಿ ಆಶ್ಚರ್ಯ ಮೂಡಿಸಿದೆ ಮಂಗಳವಾರ ಸಂಜೆ ಚುನಾವಣೆಯಿಂದ ಹಿಂದೆ ಸರಿಯುವ ಬಗ್ಗೆ ಪ್ರಕಟಣೆ ಹೊರಡಿಸಿದ ಹಾಲಾಡಿಯವರು ಇದುವರೆಗೂ ನನ್ನನ್ನು ಬೆಂಬಲಿಸಿದ ಜನತೆಗೂ ಪಕ್ಷಕ್ಕೂ ಧನ್ಯವಾದ ಸಲ್ಲಿಸಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ
ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸತತ 5 ಭಾರಿ ಗೆದ್ದಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಈ ನಿರ್ಧಾರ ಉಡುಪಿ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದೆ ಹಾಲಾಡಿಯವರು ಹಿಂದೆ ಸರಿದ ಪರಿಣಾಮ ಉಡುಪಿ ಜಿಲ್ಲೆಯ ಇತರ ವಿಧಾನಸಭಾ ಕ್ಷೇತ್ರಗಳಲ್ಲೂ ಬದಲಾವಣೆಯ ಗಾಳಿ ಬೀಸಲಿದೆಯೆಂದು ತಿಳಿದುಬಂದಿದೆ