ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲೆದೊರಿರುವ ಮರಳಿನ ಸಮಸ್ಯೆಗಳಿಗೆ ರಾಜ್ಯ ಸರಕಾರ ಕಾರಣವಲ್ಲ ನಾಲ್ಕು ವರ್ಷ ಆಡಳಿತ ನಡೆಸಿದ ಬಿಜೆಪಿಯ ಮರಳು ನೀತಿಯೇ ಕಾರಣ ಎಂದು ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಆರೋಪಿಸಿದ್ದಾರೆ ಬುಧವಾರ ಮಂಗಳೂರಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೋನ್ ಮಾಡಿದರೆ ಸಾಕು 2,000 ಕ್ಕೆ ಒಂದು ಲೋಡ್ ಮರಳು ಮನೆ ಬಾಗಿಲಿಗೆ ಬರಲಿದೆ ಎಂಬ ಬಿಜೆಪಿ ಹೇಳಿಕೆ ಅನುಷ್ಠಾನ ಆಗಿದೆಯೇ ಎಂದು ಅವರು ಪ್ರಶ್ನಿಸಿದರು
ಯುಟಿ ಖಾದರ್ ಸಚಿವರಾಗಿದ್ದಾಗ ಸ್ಯಾಂಡ್ ಬಜಾರ್ ಆಪ್ ಮಾಡಿ ಕಡಿಮೆ ಬೆಲೆಗೆ ಕ್ಲಪ್ತ ಸಮಯದಲ್ಲಿ ಮರಳು ಸಿಗುವಂತೆ ಮಾಡಿದ್ದರು ಅದನ್ನು ನಿಲ್ಲಿಸಿದವರು ಯಾರು..? ಡ್ರೆಜ್ಜಿಂಗ್ ಮೂಲಕ ಸೇತುವೆ ಅಡಿ ನಿರ್ಬಂಧಿತ ಪ್ರದೇಶದಲ್ಲಿ ಮರಳುಗಾರಿಕೆ ನಡೆಸಿದ್ದು ತಮ್ಮ ನಾಲ್ಕು ವರ್ಷಗಳ ಆಡಳಿತ ಅವಧಿಯಲ್ಲೇ ಎಂಬುದನ್ನು ಆರೋಪ ಮಾಡುವವರು ನೆನಪಿಸಿಕೊಳ್ಳಬೇಕು ಎಂದರು
ಸುದ್ದಿಗೋಷ್ಠಿಯಲ್ಲಿ ಪದ್ಮನಾಭ ನರೀಂಗಾನ ಸುಧೀರ್ ಗಣೇಶ್ ಪೂಜಾರಿ ಅಬ್ದುಲ್ ಸಲೀಂ ಶುಭೋದಯ ಆಳ್ವ ಪ್ರಕಾಶ್ ಸಾಲ್ಯಾನ್ ಲಾರೆನ್ಸ್ ಯೋಗೀಶ್ ಕುಮಾರ್ ಉಪಸ್ಥಿತರಿದ್ದರು