211
ಪಡುಬಿದ್ರಿ: ಪ್ರಾಥಮಿಕ ಆರೋಗ್ಯ ಕೇಂದ್ರ, ಪಡುಬಿದ್ರಿ ಇದರ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಪ್ರಕಾಶ್ ಪಾದೆಬೆಟ್ಟು, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ರಾಜಶ್ರೀ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯರು ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

