ಬೆಂಗಳೂರು : ರಾಜ್ಯದ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿ ಆದೇಶಿಸಿದೆ. ಅಲ್ಲದೆ, ಸ್ಥಗಿತಗೊಂಡಿರುವ ಪರೀಕ್ಷೆ ಮುಂದುವರಿಸಲು ಸೂಚನೆ ನೀಡಿದೆ. ಮುಂದಿನ ಶೈಕ್ಷಣಿಕ ವರ್ಷದ ಪರೀಕ್ಷೆಯ ವೇಳೆ ಸಂಬಂಧಪಟ್ಟವರೊಂದಿಗೆ ಸಮಾಲೋಚಿಸುವಂತೆ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದೆ