ಗಾಂಧಿನಗರ : ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಎರಡು ವರ್ಷಗಳ ಕಾಲ ಸಾದಾ ಜೈಲು ಶಿಕ್ಷೆಗೆ ಗುರಿಯಾದ ರಾಹುಲ್ ಗಾಂಧಿಯವರು ಪ್ರಕರಣಕ್ಕೆ ತಡೆಕೋರಿ ಸಲ್ಲಿಸಿದ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ಇಂದು ವಜಾಗೊಳಿಸಿದೆ
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯವರಿಗೆ ಎರಡು ವರ್ಷಗಳ ಕಾಲ ಸಾದಾ ಜೈಲು ಶಿಕ್ಷೆ ವಿಧಿಸಲಾಗಿದ್ದು ತಮ್ಮ ದೋಷಾರೋಪಣೆಗೆ ತಡೆ ನೀಡುವಂತೆ ಕೋರಿ ಅವರು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ನ್ಯಾಯಾಲಯ ಇಂದು ಶುಕ್ರವಾರ ವಜಾಗೊಳಿಸಿದೆ
ಈ ಹಿಂದೆ ಪ್ರಕರಣಕ್ಕೆ ತಡೆಯಾಜ್ಙೆ ನೀಡಲು ನಿರಾಕರಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವು ನ್ಯಾಯಯುತ ಮತ್ತು ಕಾನೂನು ಬದ್ಧವಾಗಿದೆ ಎಂದು ಹೈಕೋರ್ಟ್ ನ್ಯಾಯಾಧೀಶರು ಹೇಳಿ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದರು