ತೆಕ್ಕಟ್ಟೆ : ವಿಶ್ವವಿನಾಯಕ ಸಿ.ಬಿ.ಎಸ್.ಇ. ಸ್ಕೂಲ್ ನಲ್ಲಿ ಸಪ್ಟೆಂಬರ್ 14 ರಂದು ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಹೆಚ್. ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದಿ ಭಾಷೆಯ ಮಹತ್ವದ ಕುರಿತು ಮಾತನಾಡಿ ಪ್ರತಿಯೊಬ್ಬರು ಭಾಷೆಯನ್ನು ಕಲಿಯಬೇಕು ಎಂದು ತಿಳಿಸಿದರು. ದೇಶದ ಆಡಳಿತ ಭಾಷೆಯಾಗಿ ಹಿಂದಿ ಭಾಷೆಯ ಜೊತೆಗೆ ಆಂಗ್ಲ ಭಾಷೆಯ ಬಳಕೆಯ ಕುರಿತು ಸ್ಪಷ್ಟಪಡಿಸಿದರು.
ಶಾಲಾ ಪ್ರಾಂಶುಪಾಲ ನಿತಿನ್ ಡಿ ಆಲ್ಮೇಡಾ ರವರು ಮಾತನಾಡಿ ಪ್ರತಿ ಭಾಷೆಯಲ್ಲಿಯೂ ಸಮೃದ್ಧವಾದ ಸಾಹಿತ್ಯವಿದ್ದು ಪ್ರತಿಯೊಬ್ಬರೂ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಶುದ್ಧ ಭಾಷೆಯನ್ನು ಬಳಸಿ ಭಾಷೆಯನ್ನು ಸಮೃದ್ಧಗೊಳಿಸಬೇಕೆಂದು ತಿಳಿಸಿದರು.ವಿದ್ಯಾರ್ಥಿಗಳು ಹಿಂದಿ ದಿನಾಚರಣೆಯ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭಾಷಣಗಳನ್ನು ಮಾಡಿದರು.
ಕಾರ್ಯಕ್ರಮದಲ್ಲಿ ಸಂಯೋಜಕರಾದ ರವೀಂದ್ರ ಕೆ., ತ್ರಿವೇಣಿ, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸಮರ್ಥ ಸ್ವಾಗತಿಸಿದರು, ಸನ್ನಿಧಿ ಕಾರ್ಯಕ್ರಮ ನಿರೂಪಿಸಿದರು, ತಾರುಣ್ಯ ವಂದಿಸಿದರು. ಶಿಕ್ಷಕಿಯರಾದ ಜಯಶ್ರೀ ಹಾಗೂ ರೇಣುಕಾ ಕಾರ್ಯಕ್ರಮ ಸಂಘಟಿಸಿದರು