ಕುಂದಾಪುರ : ಹಿಂದಿ ಭಾರತದ ಪ್ರಮುಖ ಭಾಷೆಗಳಲ್ಲಿ ಒಂದು. ದೇಶದ ವಿವಿಧ ಭಾಗಗಳ ಜನರನ್ನು ಸಂಪರ್ಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ. ವಿದ್ಯಾರ್ಥಿಗಳು ಹಿಂದಿ ಭಾಷೆಯನ್ನು ಪಠ್ಯಕೇಂದ್ರಿತವಾಗಿ ಅಧ್ಯಯನ ಮಾಡದೆ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಧ್ಯಯನದ ಆಸಕ್ತಿಯ ದೃಷ್ಟಿಕೋನದೊಂದಿಗೆ ಅಭ್ಯಸಿಸಬೇಕು ಎಂದು ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಪದವಿ-ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕಿ ಶ್ರೀಮತಿ ರೇಷ್ಮಾ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಹಿಂದಿ ವಿಭಾಗ ಮತ್ತು ಭಾಷಾ ಸಂಘದ ಜಂಟಿ ಆಶ್ರಯದಲ್ಲಿ ಆಯೋಜಿಸಿದ ಹಿಂದಿ ದಿವಸ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿಂದಿ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ರೇವತಿ ಡಿ., ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಸರೋಜಾ, ಭಾಷಾ ಸಂಘದ ಸಂಯೋಜಕರಾದ ಶ್ರೀಮತಿ ಸ್ವಾತಿ ಜಿ. ರಾವ್, ಶ್ರೀಮತಿ ಪ್ರವೀಣಾ ಎಮ್. ಪೂಜಾರಿ, ಶ್ರೀಮತಿ ಮೇಘಾ ಎಸ್. ಭಟ್ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅಭಿಷೇಕ್ ಮತ್ತು ತಂಡ ಪ್ರಾರ್ಥಿಸಿ, ಅನನ್ಯ ಅಡಿಗ ಸ್ವಾಗತಿಸಿ, ಪ್ರತೀಕ್ಷಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ಮೆಲಿಶಾ ವಂದಿಸಿ, ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.
ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಹಿಂದಿ ದಿವಸ್
Hindi Diwas Celebrated at B. B. Hegde College
45
previous post
