ಕೋಟ : ಇಲ್ಲಿನ ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯ ಕದ್ರಿಕಟ್ಟುಸಮೀಪ ಸುಮಾರು 50 ಲಕ್ಷರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸುಸಜ್ಜಿತ ಹಿಂದೂ ರುದ್ರಭೂಮಿ ಕಾಮಗಾರಿ ವೇಗ ಪಡೆದುಕೊಂಡಿದೆ. ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಈ ರುದ್ರಭೂಮಿ ಪಾಳುಬಿದ್ದ ಸ್ಥಿತಿಯಲ್ಲಿ ಕಾರ್ಯಾಚರಿಸುತ್ತಿತ್ತು ಈ ಹಿನ್ನಲ್ಲೆಯಲ್ಲಿ ಸಂಸದ ಕೋಟ ಶ್ರೀನಿವಾಸ. ಪೂಜಾರಿಯವರ ಮಾರ್ಗದರ್ಶನದಲ್ಲಿ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷರೊಳಗೊಂಡ ತಂಡ ನೀಲನಕ್ಷೆ ಸಿದ್ಧಪಡಿಸಿ ಎರಡು ಶವ ದಫನ ಪೆಟ್ಟಿಗೆ ಅಳವಡಿಸಿ ಸುಸಜ್ಜಿತ ಕಟ್ಟಡ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲಕರ ವಾತಾವರಣಕ್ಕೆ ಕ್ರಮ ಕೈಗೊಂಡಿದೆ. ಪ್ರಸ್ತುತ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ೩೦.ಲಕ್ಷ ರೂ ಅನುದಾನ ಬಳಸಿಕೊಂಡು ಇನ್ನುಳಿದ ಆರ್ಥಿಕ ಕ್ರೋಡೀಕರಣಕ್ಕೆ ವೇದಿಕೆ ಸಿದ್ಧಪಡಿಸುತ್ತಿದೆ. ಈ ಹಿನ್ನಲ್ಲೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಶನಿವಾರ ಪಂಚಾಯತ್ ಅಧ್ಯಕ್ಷ ಸತೀಶ್ ಕುಂದರ್ ನೇತೃತ್ವದಲ್ಲಿ ಕಾಮಗಾರಿ ಪರಿಶೀಲಿಸಿದ್ದು ಕಾಮಗಾರಿಯ ಮಾಹಿತಿಯನ್ನು ಪಡೆದರು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್,ಉಪಾಧ್ಯಕ್ಷೆ ಸರಸ್ವತಿ ಪೂಜಾರಿ,ಸದಸ್ಯರಾದ ಪ್ರಮೋದ್ ಹಂದೆ,ವಾಸು ಪೂಜಾರಿ,ಪ್ರಕಾಶ್ ಹಂದಟ್ಟು, ವಿದ್ಯಾ ಸಾಲಿಯಾನ್, ರವೀಂದ್ರ ತಿಂಗಳಾಯ,ಸೀತಾ ಮತ್ತಿತರ ಉಪಸ್ಥಿತರಿದ್ದರು.