Home ಕರಾವಳಿ ಸುದ್ದಿರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ

ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆ

by Kundapur Xpress

ಕುಂದಾಪುರ :ನಗರದ  ಹೊಲಿ ರೋಸರಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ರಾಜಸ್ಥಾನದ ಜೈಪುರದಲ್ಲಿ ನಡೆದ 67ನೇ ರಾಷ್ಟ್ರಮಟ್ಟದ 14ರ ವಯೋಮಾನದ “ಬಾಲಕಿಯರ ಯೋಗಾಸನ” ಸ್ಪರ್ಧೆಯಲ್ಲಿ ಟಾಪ್ 10 ರಲ್ಲಿ 7ನೇ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ. ಅಲ್ಲದೇ ರಾಷ್ಟ್ರಮಟ್ಟದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಕರ್ನಾಟಕವು ಪ್ರಪ್ರಥಮ ಬಾರಿಗೆ 4 ಸ್ಥಾನ ಪಡೆದಿದೆ ಇವಳ ಈ ಸಾಧನೆಗೆ ಸಂಸ್ಥೆಯ ಸಂಚಾಲಕರು,ಮುಖ್ಯೋಪಾಧ್ಯಾಯಿನಿಯವರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ

Related Articles