Home » ಐಎಂಜೆ ಸಂಸ್ಥೆಯಲ್ಲಿ “ಫ್ರೆಷರ್ಸ್ ಡೇ”
 

ಐಎಂಜೆ ಸಂಸ್ಥೆಯಲ್ಲಿ “ಫ್ರೆಷರ್ಸ್ ಡೇ”

by Kundapur Xpress
Spread the love

ಮೂಡ್ಲಕಟ್ಟೆ : ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ “ಫ್ರೆಷರ್ಸ್ ಡೇ” ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಐಎಂಜೆ ಬ್ರ್ಯಾಂಡ್ ಬಿಲ್ಡಿಂಗ್ ನ ನಿರ್ದೇಶಕರಾದ ಡಾ. ರಾಮಕೃಷ್ಣ ಹೆಗಡೆ, ನಮ್ಮ ಸಂಸ್ಥೆಯು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸದಾ ಶ್ರಮಿಸುತ್ತಿದೆ, ಕಾಲೇಜಿನ ಪ್ರಾರ್ಥನೆಯ “ಬದುಕ ಕಲಿಯಲು ಬೇಕು ಬದುಕ ಸವೆಯಲು ಬೇಕು”ಎಂಬ ಸಾಲುಗಳನ್ನು ವಿದ್ಯಾರ್ಥಿಗಳೆಲ್ಲ ಅರ್ಥೈಸಿಕೊಂಡರೆ ಯಶಸ್ಸು ಸಾಧ್ಯ ಎಂದು ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಪಟೇಲ್ ರವರು ವಿದ್ಯಾರ್ಥಿಗಳು ತಮಗೆ ಸಿಕ್ಕ ಅವಕಾಶಗಳನ್ನು ಚೆನ್ನಾಗಿ ಸದುಪಯೋಗ ಪಡಿಸಿಕೊಂಡು ಉನ್ನತವಾದ ಸಾಧನೆಯನ್ನು ಮಾಡಬೇಕೆಂದು ಶುಭ ಹಾರೈಸಿದರು. ಪ್ರಾಂಶುಪಾಲರಾದ ಶ್ರೀ ಜಯಶೀಲ ಕುಮಾರ್ ರವರು ವಿದ್ಯಾರ್ಥಿಗಳಿಗೆ ಕಾಲೇಜಿನ ವಿವಿಧ ವೇದಿಕೆಗಳನ್ನು ಸದುಪಯೋಗಪಡಿಸಿಕೊಳ್ಳುವುದರ ಮೂಲಕ ಸರ್ವಾಂಗಿನ ಅಭಿವೃದ್ಧಿಯನ್ನು ಹೊಂದಬೇಕು ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಗಣಕ ಶಾಸ್ತ್ರ ಮುಖ್ಯಸ್ಥರಾದ ಶ್ರೀಮತಿ ಸ್ವರ್ಣ ರಾಣಿ ಹಾಗೂ ವಾಣಿಜ್ಯಶಾಸ್ತ್ರ ಮುಖ್ಯಸ್ಥರಾದ ಶ್ರೀಮತಿ ಅರ್ಚನಾ ಗದ್ದೆ ಯವರು ಉಪಸ್ಥಿತರಿದ್ದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಕು. ರಶಿಕಾ ಕಾರ್ಯಕ್ರಮವನ್ನು ನಿರೂಪಿಸಿದರು

   

Related Articles

error: Content is protected !!