ಉದ್ಯೋಗ ಎಕ್ಸ್‌ಪ್ರೆಸ್ 2026 ಉದ್ಘಾಟನೆ

by Kundapur Xpress

ಐಎಂಜೆ ಶಿಕ್ಷಣ ಸಂಸ್ಥೆಗಳು, 1ಎಂ1ಬಿ ಹಾಗೂ ರಾಜ್ಯ ಸರ್ಕಾರದ ಮೈಕ್ರೋಸಾಫ್ಟ್ ಮತ್ತು ಮೈಟಿ ಸಹಯೋಗದಲ್ಲಿ, “ಉದ್ಯೋಗ ಎಕ್ಸ್‌ಪ್ರೆಸ್ 2026” ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಭಾ ಕಾರ್ಯಕ್ರಮವು ಸೆಪ್ಟೆಂಬರ್ 18, 2026ರಂದು ಕುಂದಾಪುರದ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯ (ಎಂಐಟಿ) ಆವರಣದಲ್ಲಿ ಬೆಳಿಗ್ಗೆ 9.30ಗೆ ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಡಾ. ಸ್ಯಾಮುಯೆಲ್ ಅಗಸ್ಟಸ್ ನಾರ್ಟನ್ ಸ್ಟ್ಯಾನ್ಲಿ , ಆರ್ಕಿಟೆಕ್ಟ್, ಐಬಿಎಂ ಇಂಡಿಯಾ ಕ್ಲೌಡ್ ಲ್ಯಾಬ್ಸ್ ಅವರು ಭಾಗವಹಿಸಲಿದ್ದಾರೆ.

ಗೌರವಾನ್ವಿತ ಅತಿಥಿಗಳಾಗಿ ಶ್ರೀ ಅಭಿರಾಮ್ ನಟರಾಜನ್ , ಕಾರ್ಯಕ್ರಮ ನಿರ್ದೇಶಕರು, ಗ್ರಾಸ್‌ರೂಟ್ ಇನಿಶಿಯೇಟಿವ್ಸ್, 1ಎಂ1ಬಿ ಅವರು ಆಗಮಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐಎಂಜೆ ಶಿಕ್ಷಣ ಸಂಸ್ಥೆಗಳ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಸಿದ್ಧಾರ್ಥ ಜೆ. ಶೆಟ್ಟಿ ಅವರು ವಹಿಸಲಿದ್ದಾರೆ.

ಐಎಂಜೆ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕರಾದ ಡಾ. ಎಸ್. ಎನ್. ಭಟ್ ಅವರು ಸಭಾ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.
ಉದ್ಯೋಗ ಮೇಳಕ್ಕೆ ಈಗಾಗಲೇ 1,500ಕ್ಕೂ ಅಧಿಕ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 30ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ.

ಪ್ರಮುಖವಾಗಿ ನುವಿನ್ ಗ್ಲೋಬಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಟಾಟಾ ಎಲೆಕ್ಟ್ರಾನಿಕ್ಸ್, ವಿಪ್ರೋ ಕವಾಸಕಿ, ವಿನ್‌ಮ್ಯಾನ್ ಸಾಫ್ಟ್‌ವೇರ್ ಸೇರಿದಂತೆ ಹಲವು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ.

ಇದಲ್ಲದೆ, ಉದ್ಯೋಗಾಕಾಂಕ್ಷಿಗಳಿಗೆ ಸ್ಥಳದಲ್ಲಿಯೇ ನೋಂದಣಿ (ಆನ್-ಸ್ಪಾಟ್ ರಿಜಿಸ್ಟ್ರೇಷನ್) ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಈ ಬೃಹತ್ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಕಾಲೇಜಿನ ಆಡಳಿತ ಮಂಡಳಿ ಆಶಯ ವ್ಯಕ್ತ ಪಡಿಸಿದ್ದಾರೆ.

Related Articles