ಮೂಡ್ಲಕಟ್ಟೆ : ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಏಳನೇ ದಿನದ ದೀಕ್ಷಾರಂಭ ಕಾರ್ಯಕ್ರಮದ ಅಡಿಯಲ್ಲಿ “ಅಗ್ನಿ ಸುರಕ್ಷತಾ ಜಾಗೃತಿ”ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರ ಅಗ್ನಿಶಾಮಕ ದಳದ ಅಧಿಕಾರಿಗಳಾದ ಶ್ರೀ ಬಾಲಕೃಷ್ಣ, ಶ್ರೀ ಕೇಶವ ಹಾಗೂ ಶ್ರೀ ಸುಂದರ ಮತ್ತು ಅಗ್ನಿ ಸುರಕ್ಷತಾ ತಂಡ ಅಗ್ನಿ ಸುರಕ್ಷತೆಯ ಕುರಿತು ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿಗಳನ್ನು ನೀಡಿದರು.
ವಿವಿಧ ರೀತಿಯ ಅಗ್ನಿ ದುರಂತ ಮತ್ತು ಅದನ್ನು ಎದುರಿಸುವ ವಿಧಾನದ ಬಗ್ಗೆ ಮಾಹಿತಿ ನೀಡಿದರು. ಆಗ್ನಿ ದುರಂತದ ಸಂದರ್ಭದಲ್ಲಿ ಉಪಯೋಗಿಸಬಹುದಾದ ವಿವಿಧ ಉಪಕರಣಗಳನ್ನು ಹೇಗೆ ಬಳಸಬೇಕು ಎಂಬುದನ್ನು ವಿವಿಧ ಅಣಕು ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳಿಗೆ ತೋರಿಸಲಾಯಿತು. ಉಪ ಪ್ರಾಂಶುಪಾಲರಾದ ಶ್ರೀ ಜಯಶೀಲ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಐ ಎಂ ಜೆ ಪದವಿ ಕಾಲೇಜಿನ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ರಶಿತಾ ಕಾರ್ಯಕ್ರಮವನ್ನು ನಿರೂಪಿಸಿದರು