ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

by Kundapur Xpress
Spread the love

ಉಡುಪಿ : ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.

ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಿಕಟಪೂರ್ವ ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಮಾಜಿ ಉಪಾಧ್ಯಕ್ಷ ರವಿ ಅಮೀನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಜಿಲ್ಲಾ ಮಾಧ್ಯಮ ಸಹ ಸಂಚಾಲಕ ಮಂಜುನಾಥ್ ಮಣಿಪಾಲ, ಜಿಲ್ಲಾ ಸರಲ್ ಆಪ್ ಪ್ರಮುಖ್ ಚಂದ್ರಶೇಖರ ಪ್ರಭು, ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಮಾಜಿ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಥ್ವಿರಾಜ್ ಮಣಿಪಾಲ, ಉಡುಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಪ್ರಧಾನ ಕಾರ್ಯದರ್ಶಿ ತ್ರಿವೇಣಿ, ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ನಗರ ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಉಡುಪಿ ನಗರ ಮಹಿಳಾ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

 

Related Articles

error: Content is protected !!