ತೆಕ್ಕಟ್ಟೆ: ಸೇವಾ ಸಂಗಮ ವಿದ್ಯಾಕೇಂದ್ರ ವಿದ್ಯಾಗಿರಿ, ತೆಕ್ಕಟ್ಟೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಬ್ಯಾಂಕ್ ಆಫ್ ಬರೋಡಾ, ಕುಂಭಾಶಿ ಶಾಖೆಯ ಮ್ಯಾನೇಜರ್ ಶ್ರೀ ಬೇಳೂರು ಕರುಣಾಕರ ಶೆಟ್ಟಿ ಅವರು ಮಾತನಾಡಿ, ವಿದ್ಯಾರ್ಥಿಗಳ ಕರ್ತವ್ಯ ಹಾಗೂ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವಲ್ಲಿ ಎದುರಾಗುತ್ತಿರುವ ಸವಾಲುಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸ್ವಾತಂತ್ರ್ಯದ ಮಹತ್ವವನ್ನು ಅರಿತು ಶಿಸ್ತು, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯುತ ಮನೋಭಾವದಿಂದ ದೇಶದ ಪ್ರಗತಿಗೆ ಕೊಡುಗೆ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾ ಸಂಗಮ ವಿದ್ಯಾಕೇಂದ್ರ ವಿದ್ಯಾಗಿರಿ, ತೆಕ್ಕಟ್ಟೆಯ ಅಧ್ಯಕ್ಷರಾದ ಶ್ರೀ ಸುರೇಶ್ ಬೆಟ್ಟಿನ್ ವಹಿಸಿದ್ದರು. ಶ್ರೀ ಅನಂತ ನಾಯಕ್ ಹಾಗೂ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಅರುಣ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಶ್ರೀ ಕಮಲಾಕ್ಷ ಪೈ ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀ ಹರ್ಷ ಕೋಟೇಶ್ವರ ಉಪಸ್ಥಿತರಿದ್ದರು.
ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 7ನೇ ತರಗತಿಯ ವಿದ್ಯಾರ್ಥಿ ನಾಯಕ ಸಮರ್ಥ ಸ್ವಾಗತಿಸಿದರು. ಸುಮದೃಥ ವಂದನಾರ್ಪಣೆ ನೆರವೇರಿಸಿದರು. ಸಹನಾ ವಿ. ಬಾಯರಿ ಕಾರ್ಯಕ್ರಮವನ್ನು ನಿರೂಪಿಸಿದರು.

