183
ಉಡುಪಿ : ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಕಾಲೇಜು ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿದ ಬಗ್ಗೆ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕಿ ರಶ್ಮಿ ಅವರು ಸ್ಪಷ್ಟನೆ ನೀಡಿದ್ದಾರೆ
ಘಟನೆಯ ಕುರಿತು ಮಾಹಿತಿಯನ್ನು ಒದಗಿಸಿಲ್ಲ ಎಂದು ದೂರಿನಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ ಆದರೆ ಕಾಲೇಜು ಆಡಳಿತ ಮಂಡಳಿಯ ಪರವಾಗಿ ಶೈಕ್ಷಣಿಕ ಸಂಯೋಜನಾಧಿಕಾರಿ ಬಾಲಕೃಷ್ಣ ಪರ್ಕಳ ಅವರು ಜುಲೈ 22 ರಂದು ಮಲ್ಪೆ ಠಾಣೆಗೆ ಭೇಟಿ ನೀಡಿ ಮೊಬೈಲ್ ಫೋನ್ಗಳಲ್ಲಿ ಚಿತ್ರೀಕರಣ ಮಾಡಲಾಗಿದೆಯೇ ಮತ್ತು ಅದನ್ನು ಫಾರ್ವರ್ಡ್ ಮಾಡಲಾಗಿದೆಯೇ ಎಂಬ ಕುರಿತು ತನಿಖೆ ನಡೆಸಲು ಮಲ್ಪೆ ಠಾಣೆಗೆ ಲಿಖಿತವಾಗಿ ಅರ್ಜಿ ಸಲ್ಲಿಸಿದ್ದಾರೆ ಅದೇ ದಿನ ಮಲ್ಪೆಯ ವೃತ್ತ ನಿರೀಕ್ಷಕರಿಗೂ ಪತ್ರದ ಮೂಲಕ ತನಿಖೆ ನಡೆಸುವಂತೆ ಮನವಿ ಸಲ್ಲಿಸಿ 3 ಮೊಬೈಲ್ ಫೋನ್ ಗಳನ್ನು ಪೊಲೀಸರ ವಶಕ್ಕೆ ನೀಡಿದ್ದರು ಮೊಬೈಲ್ ಗಳನ್ನು ಸ್ವಾಧೀನಪಡಿಸಿಕೊಂಡ ಬಗ್ಗೆ ಪೊಲೀಸರು ನೀಡಿರುವ ಸ್ವೀಕೃತಿ ಪತ್ರ ನಮ್ಮಲ್ಲಿದೆ ಎಂದು ರಶ್ಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

