Home » ನೂತನ ಪದಾಧಿಕಾರಿಗಳ ಪದಗ್ರಹಣ
 

ನೂತನ ಪದಾಧಿಕಾರಿಗಳ ಪದಗ್ರಹಣ

by Kundapur Xpress
Spread the love

ಉಡುಪಿ  : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು’ ಇದರ 2023-25ನೇ ಸಾಲಿನ ‘ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ’ವು ಇಂದು ಡಿಸೆಂಬರ್ 30, ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಿಯಾಗಿ ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ.)’ ಇದರ ಉಡುಪಿ ಅಂಬಲಪಾಡಿಯ ‘ಪ್ರಗತಿ ಸೌಧ’ ಸಭಾಂಗಣದಲ್ಲಿ (ಅಂಬಲಪಾಡಿ ರಾಷ್ಟ್ರೀಯ ಹೆದ್ದಾರಿಯಿಂದ ಬ್ರಹ್ಮಗಿರಿಗೆ ಸಾಗುವ ರಸ್ತೆ) ನಡೆಯಲಿದೆ.

ಉಡುಪಿ ವಿಧಾಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ಪಾಲ್ ಎ. ಸುವರ್ಣರವರು ಸಮಾರಂಭವನ್ನು ಉದ್ಘಾಟಿಸಿ ನೂತನ ಪದಾಧಿಕಾರಿಗಳ ಪದಗ್ರಹಣವನ್ನು ನೆರವೇರಿಸಲಿದ್ದಾರೆ. ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಶ್ರೀ ದುಗ್ಗೇ ಗೌಡ, ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ಆರ್.ಪಿ. ಪುರುಷೋತ್ತಮ್, ಜಿಲ್ಲಾ ನಿರ್ದೇಶಕರಾದ ಶ್ರೀ ಶಿವರಾಯ ಪ್ರಭು, ಉಡುಪಿ ತಾಲೂಕು ಯೋಜನಾಧಿಕಾರಿ ಶ್ರೀ ರಾಮ ಎಮ್. ಹಾಗೂ ತಾಲೂಕು ಭಜನಾ ಪರಿಷತ್ ನ ನೂತನ ಪದಾಧಿಕಾರಿಗಳು ಮತ್ತು ತಾಲೂಕಿನ ಭಜನಾ ಮಂಡಳಿಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

   

Related Articles

error: Content is protected !!