ಹೆಮ್ಮಾಡಿ : ಶಿಕ್ಷಣ ಕ್ಷೇತ್ರಕ್ಕೆ ವಿಶೇಷವಾದ ರೀತಿಯಲ್ಲಿ ಕೊಡುಗೆಗಳನ್ನು ನೀಡುತ್ತಿರುವ ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಗಣೇಶ ಮೊಗವೀರ ಅವರು ಕನ್ನಡ ಮಾಧ್ಯಮ ಸಂಸ್ಥೆ ಕೊಡಮಾಡುವ ಅಂತಾರಾಷ್ಟ್ರೀಯ ಮಟ್ಟದ ಐಕಾನಿಕ್ ಪ್ರಶಸ್ತಿಗೆ ಆಯ್ಕೆ ಯಾಗಿದ್ದಾರೆ. ವಿಯೆಟ್ನಾಂನಲ್ಲಿ ನಡೆಯಲಿರುವ ಅದ್ದೂರಿ ಸಮಾರಂಭದಲ್ಲಿ ಗಣ್ಯಾತಿಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿಯನ್ನು ಸ್ವೀಕಾರ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ