Home » ಅಂತರಾಷ್ಟ್ರೀಯ ಯೋಗ ದಿನಾಚರಣೆ
 

ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ ಜಿಲ್ಲಾ ಬಿಜೆಪಿ

by Kundapur Xpress
Spread the love

ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ಶುಕ್ರವಾರ ಬೆಳಿಗ್ಗೆ ಗಂಟೆ 7.00ರಿಂದ 8.00ರ ತನಕ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಯೋಗಾಭ್ಯಾಸದ ಮೂಲಕ ಆಚರಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಯೋಗ ಶಿಕ್ಷಕಿ ಶೋಭಾ ಶೆಟ್ಟಿ ಇಂದ್ರಾಳಿ ಅವರು ಯೋಗ ತರಗತಿಯನ್ನು ನಡೆಸಲಿದ್ದು, ಶಾಸಕರು, ಪಕ್ಷದ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಭಾಗವಹಿಸಿ ಯೋಗಾಭ್ಯಾಸದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯ ಎಲ್ಲ ಮಂಡಲಗಳು ಮತ್ತು ಆಯ್ದ ಮಹಾಶಕ್ತಿ ಕೇಂದ್ರಗಳಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

   

Related Articles

error: Content is protected !!