77
🌾🎋🍃🪷🍃🪷🍃🪷🍃🎋🌾
ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’ಯು ಬಿಜೆಪಿ ಉಡುಪಿ ನೂತನ ಜಿಲ್ಲಾಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿಯವರ ನೇತೃತ್ವದಲ್ಲಿ ಬಿಜೆಪಿ ಉಡುಪಿ ನಗರ ಮಂಡಲದ ಸಹಯೋಗದೊಂದಿಗೆ ಜೂ.21 ಶನಿವಾರ ಬೆಳಿಗ್ಗೆ ಗಂಟೆ 7.00ರಿಂದ 8.00ರ ತನಕ ಉಡುಪಿಯ ಹೋಟೆಲ್ ಕಿದಿಯೂರ್ ನ ‘ಶೇಷಶಯನ ಸಭಾಂಗಣ’ದಲ್ಲಿ ನಡೆಯಲಿದೆ.
ಯೋಗ ಗುರು ಡಾ! ದಿನೇಶ್ ನಾಯಕ್ ಅವರು ಯೋಗ ತರಗತಿಯನ್ನು ನಡೆಸಿಕೊಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಂಸದರು, ಶಾಸಕರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಿಜೆಪಿ ಪ್ರಕಟಣೆ ತಿಳಿಸಿದೆ

